ಶಾಕಿಂಗ್: ಜಾಹೀರಾತಿಗಾಗಿ ಸಿದ್ದರಾಮಯ್ಯ ಸರ್ಕಾರ ಖರ್ಚು ಮಾಡಿದೆಷ್ಟು ಗೊತ್ತಾ..!?

ಕರ್ನಾಟಕ ರಾಜ್ಯದಲ್ಲಿ ಕಳೆದ ಐದು ವರ್ಷಗಳ ಕಾಲ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಜಾಹೀರಾತಿಗಾಗಿ ನೂರಾರು ಕೋಟಿ ರೂಪಾಯಿಗಳಷ್ಟು ಹಣವನ್ನು ಖರ್ಚು ಮಾಡಿದೆ ಎನ್ನುವ ಮಾಹಿತಿಯು ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿದ್ದ ಅರ್ಜಿಯಿಂದ ಬಹಿರಂಗವಾಗಿದೆ.
ಎಸ್… ಹಿಂದೆ ಇದ್ದ ಸಿದ್ದರಾಮಯ್ಯ ಸರ್ಕಾರ ಬರೋಬ್ಬರಿ 226 ಕೋಟಿ ಹಣವನ್ನು ಜಾಹೀರಾತಿಗಾಗಿಯೇ ಖರ್ಚು ಮಾಡಿದೆ ಎನ್ನುವುದು ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ್ ಎನ್ನುವವರು ಸಲ್ಲಿಸಿದ ಆರ್‌ಟಿಐನಡಿ ಬಯಲಿಗೆ ಬಂದಿದೆ.ಈ ಬಾರಿಯ ಚುನಾವಣಾ ಪ್ರಚಾರಕ್ಕೆ 142 ಕೋಟಿ ರೂ. ಹಣವನ್ನು ಸರ್ಕಾರ ಪ್ರಚಾರಕ್ಕಾಗಿ ಬಳಸಿಕೊಂಡಿದೆ. ಜನರಿಂದ ತೆರಿಗೆ ರೂಪದಲ್ಲಿ ಸಂಗ್ರಹಿಸಿದ ಹಣವನ್ನು ಸರ್ಕಾರ ಪೋಲು ಮಾಡಿದೆ ಎಂದು ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ್ ಆರೋಪವನ್ನು ವ್ಯಕ್ತ ಪಡಿಸಿದ್ದಾರೆ.
Comments