ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನಗೆ ಭರ್ಜರಿ ಗೆಲುವು

ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಅವರು ಭರ್ಜರಿ ಅಂತರದ ಜಯ ಸಾಧಿಸಿದ್ದಾರೆ. ನಗರದ ಪ್ರತಿಷ್ಠಿತ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಮುಗಿದಿದ್ದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮುನಿರತ್ನ 97,440 ಮತಗಳನ್ನು ಪಡೆದು ಭರ್ಜರಿ ಜಯ ಸಾಧಿಸಿದ್ದಾರೆ.
ಮುನಿರತ್ನ ಅವರು 14ನೇ ಸುತ್ತಿನಲ್ಲಿ 97,440 ಮತಗಳ ಅಂತರದಲ್ಲಿ ಮುನ್ನಡೆ ಕಂಡಿದ್ದಾರೆ. ಬಿಜೆಪಿಯ ಮುನಿರಾಜು ಗೌಡ 56,278 ಮತಗಳನ್ನು ಪಡೆದರೆ ಜೆಡಿಎಸ್ ನ ರಾಮಚಂದ್ರ 45,345 ಮತಗಳನ್ನು ಪಡೆದುಕೊಂಡಿದ್ದಾರೆ. ಮುನಿರತ್ನ ಅವರು ಎರಡನೇ ಬಾರಿಗೆ ಶಾಸಕರಾಗುವುದು ಬಹುತೇಕ ಖಚಿತವಾಗಿದ್ದು, ಇನ್ನೇನಿದ್ದರೂ ಚುನಾವಣಾ ಆಯೋಗದ ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ.
Comments