ಬಿಜೆಪಿ ಗೆ ಬರೆ ಮೇಲೆ ಬರೆ ಎಳೆದಂತೆ ಎದುರಾಗ್ತಿದೆ ಬಿಗ್ ಶಾಕ್..!!

ಮುಂದಿನ ಲೋಕಸಭಾ ಚುನಾವಣೆ ಸಲುವಾಗಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಮಾಡಿಕೊಳ್ಳುವುದಕ್ಕೆ ಸಿದ್ದವಾಗಿದೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಎರಡೂ ಪಕ್ಷಗಳ ನಾಯಕರು ಮಾತುಕತೆ ನಡೆಸಿದ್ದು ಈ ಸಂಬಂಧ ತಾಯಿ ಸೋನಿಯಾ ಗಾಂಧಿ ಚಿಕಿತ್ಸೆ ಸಲುವಾಗಿ ಅಮೆರಿಕಕ್ಕೆ ಹೋಗಿರೋ ರಾಹುಲ್ ಗಾಂಧಿ ಬುಧವಾರವಷ್ಟೇ ವೀಡಿಯೋ ಕಾನ್ಫೆರೆನ್ಸ್ ಮೂಲಕ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಒಂದು ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಲೋಕಸಭಾ ಚುನಾವಣೆಯಲ್ಲಿ ಮೈತ್ರಿಗೆ ಮುಂದಾಗಿ ಜಂಟಿಯಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ ಪಕ್ಷದಲ್ಲಿ ಮೈಸೂರು, ಚಿಕ್ಕಮಗಳೂರು, ತುಮಕೂರು, ಕೋಲಾರ, ಹಾಸನ, ಶಿವಮೊಗ್ಗ, ದಾವವಣಗೆರೆ, ಚಿತ್ರದುರ್ಗ ಸೇರಿದಂತೆ ಹಳೇ ಮೈಸೂರು ಭಾಗದ ಜಿಲ್ಲೆಗಳನ್ನು ಬಿಜೆಪಿ ಲೋಕಸಭಾ ಸದ್ಯಸರು ಸದ್ಯ ಚುನಾಯಿತರಾಗಿರುವ ಕ್ಷೇತ್ರಗಳಲ್ಲಿ ದೊಡ್ಡ ಮಟ್ಟಿನ ಪೈಪೋಟಿಯಾಗುವುದರಲ್ಲಿ ಸಂಶಯವಿಲ್ಲ. ಇನ್ನೂ ಎರಡೂವರೆ ವರ್ಷಕ್ಕೆ ಸಿಎಂ ಬದಲಾಗ್ತಾರೆ ಗಾಳಿ ಸುದ್ದಿಗಳಿಗೂ ಕೂಡ ಬ್ರೇಕ್ ಬಿದಿದ್ದು, 5 ವರ್ಷದ ಪೂರ್ಣಾವಧಿಗೆ ಕುಮಾರಸ್ವಾಮಿಯೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಅಂತ ಹೇಳಲಾಗಿದ್ದು, ಈ ನಿಟ್ಟಿನಲ್ಲಿ ಉಭಯ ನಾಯಕರ ಮುಂದಾಳತ್ವದಲ್ಲಿ ಜೆಡಿಎಸ್-ಕಾಂಗ್ರೆಸ್ ಪಕ್ಷದ ಸಮನ್ವಯ ಸಮಿತಿಯನ್ನು ರಚನೆ ಮಾಡಲಾಗಿದೆ. ಇನ್ನು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಪ್ರಣಾಳಿಕೆಯನ್ನು ಜಾರಿ ಮಾಡುವ ನಿಟ್ಟಿನಲ್ಲೂ ಕೂಡ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಘೋಷಣೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ.
Comments