ರಾಮನಗರ ಕ್ಷೇತ್ರದ ಉಪಚುನಾವಣೆಯ ಕಣಕ್ಕಿಳಿಯಲಿರುವ ಜೆಡಿಎಸ್ ಅಭ್ಯರ್ಥಿ ಯಾರ್ ಗೊತ್ತಾ?

ವಿಧಾನಸಭಾ ಉಪ ಚುನಾವಣೆಯ ಹಿನ್ನಲೆಯಲ್ಲಿ ರಾಮನಗರ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷ ಹೊಂದಾಣಿಕೆ ಮಾಡಿಕೊಂಡು ಏಕೈಕ ಅಭ್ಯರ್ಥಿಯನ್ನು ನಿಲ್ಲಿಸುವ ಇಂಗಿತ ವ್ಯಕ್ತಪಡಿಸಿದ್ದು, ಜೆಡಿಎಸ್ ಅಭ್ಯರ್ಥಿಯಾಗಿ ಸೊರಬ ಕ್ಷೇತ್ರದ ಮಾಜಿ ಶಾಸಕರಾದ ಮಧು ಬಂಗಾರಪ್ಪ ಸ್ಪರ್ಧೆ ಮಾಡುವ ಎಲ್ಲಾ ಸಾಧ್ಯತೆಗಳಿವೆ ಎನ್ನಲಾಗಿದೆ.
ಮಧು ಬಂಗಾರಪ್ಪ ಅಭ್ಯರ್ಥಿಯಾಗುವ ಬಗ್ಗೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಕುಮಾರಸ್ವಾಮಿ ಜೊತೆ ಚರ್ಚೆ ಮಾಡಿದ್ದು, ಇಬ್ಬರೂ ಮುಖಂಡರು ಕೂಡ ಗ್ರೀನ್ ಸಿಗ್ನಲ್ ಅನ್ನು ಈಗಾಗಲೇ ನೀಡಿದ್ದಾರೆ ಎನ್ನಲಾಗಿದೆ. ರಾಮನಗರ ಹಾಗೂ ಚನ್ನಪಟ್ಟಣ ಎರಡು ಕ್ಷೇತ್ರದಿಂದ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸ್ಪರ್ಧೆ ಮಾಡಿ ಗೆಲುವನ್ನು ಸಾಧಿಸಿದ್ದರು. ಬಳಿಕ ಚನ್ನಪಟ್ಟಣ ಕ್ಷೇತ್ರ ಉಳಿಸಿಕೊಂಡು ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಈ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದೆ.
Comments