ಬ್ರೇಕಿಂಗ್ ನ್ಯೂಸ್ : ಯಾರಿಗೆ ಒಲಿಯಲಿದೆ ನೂತನ ಕೆಪಿಸಿಸಿ ಅಧ್ಯಕ್ಷ ಪಟ್ಟ..!? ಹೈಕಮಾಂಡ್ ನ ನಿರ್ಧಾರ ಏನ್ ಗೊತ್ತಾ...?
ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಸಂಘಟನೆಗೆ ಒತ್ತು ಕೊಡಬೇಕೆಂದು ಸೂಚನೆ ನೀಡಿರುವ ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕ ಸಮರ್ಥ ಅಭ್ಯರ್ಥಿಯ ಶೋಧ ನಡೆಸಿದೆ.
ಹಾಲಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರು ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು, ಅಧ್ಯಕ್ಷ ಸ್ಥಾನ ತೆರವುಗೊಳಿಸುವುದು ಖಚಿತವಾಗಿದೆ. ಹೀಗಾಗಿ ಹೊಸಬರ ನೇಮಕಕ್ಕೆ ಕೈ ಹೈಕಮಾಂಡ್ ಮುಂದಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವರಾದ ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ್, ಎಸ್.ಆರ್. ಪಾಟೀಲ್ ಅವರ ಹೆಸರು ಮುಂಚೂಣಿಯಲ್ಲಿದೆ. ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್, ಕೋಲಾರ ಸಂಸದ ಕೆ.ಎಚ್. ಮುನಿಯಪ್ಪ ಅವರ ಹೆಸರು ಮುಂಚೂಣಿಯಲ್ಲಿವೆ. ಡಿ.ಕೆ.ಶಿವಕುಮಾರ್ ಅವರು ಸಚಿವ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೂ ಕಣ್ಣಿಟ್ಟಿದ್ದಾರೆ. ಎರಡೂ ಹುದ್ದೆಗಳನ್ನು ನಿಭಾಯಿಸುವ ಭರವಸೆ ನೀಡಿದ್ದಾರೆ. ಸಚಿವ ಸ್ಥಾನ ಸಿಗದಿದ್ದರೆ, ಎಂ.ಬಿ.ಪಾಟೀಲ್ ಅಧ್ಯಕ್ಷರಾಗಲು ಬಯಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಎಸ್. ಆರ್. ಪಾಟೀಲ್ ರನ್ನು ಮಂತ್ರಿ ಮಾಡಲು ಪಟ್ಟು ಹಿಡಿದಿದ್ದು, ಸಾಧ್ಯವಾಗದಿದ್ದರೆ ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಬೇಕೆಂದು ವರಿಷ್ಠರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನಲ್ಲಿ ಸಭೆ ಸೇರಿದ್ದ ಕೆಲವು ಶಾಸಕರು ಮಾಜಿ ಸಚಿವ ಕೃಷ್ಣಬೈರೇಗೌಡ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಬೇಕೆಂದು ವರಿಷ್ಠರ ಮೇಲೆ ಒತ್ತಡ ಹೇರಲು ನಿರ್ಧರಿಸಿದ್ದಾರೆ. ಮತ್ತೊಂದಡೆ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಅವರನ್ನು ಸಚಿವರನ್ನಾಗಿ ಮಾಡಬೇಕು ಇಲ್ಲವೇ ಕೆಪಿಸಿಸಿ ಕಾರ್ಯಧ್ಯಕ್ಷರನ್ನಾಗಿಯೂ ನೇಮಿಸಬೇಕೆಂದು ಕೆಲವು ಶಾಸಕರು ಒತ್ತಡ ತರುತ್ತಿದ್ದಾರೆ ಎನ್ನಲಾಗಿದೆ.
Comments