ರಾಜ್ಯ ಮೈತ್ರಿ ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಬಿ.ಎಸ್.ವೈ..!

ರೈತರ ಸಾಲ ಮನ್ನಾ ಮಾಡುವ ಹಿನ್ನಲೆಯಲ್ಲಿ ಸಾಕಷ್ಟು ಹೋರಾಟಗಳನ್ನು ಮಾಡಿ ರಾಜ್ಯದ ಮನಗೆದ್ದಿರುವ ಬಿಎಸ್ ಯಡಿಯೂರಪ್ಪನವರು ಕಾಂಗ್ರೆಸ್, ಜೆಡಿಎಸ್ ಗೆ ಸಖತ್ ಆಗಿರೊ ಸವಾಲನ್ನೆ ಹಾಕಿದ್ದಾರೆ.
ತಾಕತ್ ಇದ್ರೆ, ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬರಲಿ, ಈ ಚುನಾವಣೆಯ ಕ್ಷಣದಲ್ಲೇ ವಿಧಾನಸಭೆ ವಿಸರ್ಜನೆಗೊಂಡರೆ ಬಿಜೆಪಿ 150 ಕ್ಕೂ ಹೆಚ್ಚು ಸ್ಥಾನ ಗೆದ್ದು ಅಧಿಕಾರಕ್ಕೆ ಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕಾಂಗ್ರೆಸ್, ಜೆಡಿಎಸ್ ಪಕ್ಷಕ್ಕೆ ಸವಾಲೆಸೆದರು. ನಗರದಲ್ಲಿ ನಡೆಯುತ್ತಿರುವ ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈ. ಎ ನಾರಾಯಣಸ್ವಾಮಿ ಪರ ಮತಯಾಚನೆ ಸಭೆಯ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್ ಮುಖಂಡರು ಅತೃಪ್ತಿ, ಅಸಮಾಧಾನ ಹೊರ ಹಾಕುತ್ತಿದ್ದಾರೆ. ಯಾವ ಕ್ಷಣದಲ್ಲಿ ಏನು ಬೇಕಾದರೂ ಆಗಬಹುದು ಎಂದು ಸಮ್ಮಿಶ್ರ ಸರ್ಕಾರದ ವಿರುದ್ಧ ಭವಿಷ್ಯವನ್ನು ನುಡಿದ್ದಾರೆ.
Comments