ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕೇಳಿಬಂದ ಈ ಅಚ್ಚರಿ ಹೆಸರು..!ಹೈಕಮಾಂಡ್ ನ ಮಹತ್ವದ ನಿರ್ಧಾರ ಏನ್ ಗೊತ್ತಾ ?

ಕೆಪಿಸಿಸಿ ಅಧ್ಯಕ್ಷರಾಗಿ ದಾಖಲೆಯ ಅವಧಿಯಲ್ಲಿ ಕಾರ್ಯ ನಿರ್ವಹಿಸಿದ ಬಳಿಕ ಡಾ.ಜಿ.ಪರಮೇಶ್ವರ ಅವರು ರಾಜೀನಾಮೆ ನೀಡಿದ್ದಾರೆ. ಸದ್ಯ ಉಪ ಮುಖ್ಯಮಂತ್ರಿಯಾಗಿ ಮೈತ್ರಿ ಸರ್ಕಾರದಲ್ಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾಗಲಿದೆ. ನನಗಿಂತ ಉತ್ತಮರನ್ನು ಹೈಕಮಾಂಡ್ ಆಯ್ಕೆ ಮಾಡಲಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ' ಎಂದು ಡಾ.ಜಿ.ಪರಮೇಶ್ವರ ಹೇಳಿದರು.
ಇದೀಗ ಹೊಸದಾಗಿ ಹಿರಿಯ ಕಾಂಗ್ರೆಸ್ಸಿಗ ಆರ್.ವಿ.ದೇಶಪಾಂಡೆ ಅವರ ಹೆಸರು ಕೇಳಿ ಬಂದಿರುವುದರಿಂದ ಬ್ರಾಹ್ಮಣ, ಲಿಂಗಾಯತ ಹೀಗೆ ವಿವಿಧ ಜಾತಿಯ ಮುಖಂಡರು ರೇಸಿನಲ್ಲಿದ್ದಾರೆ. ದಲಿತ ಖೋಟಾದಡಿಯಲ್ಲಿ ಜಿ ಪರಮೇಶ್ವರ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ಸಿಕ್ಕಿರುವುದರಿಂದ ದಲಿತರಿಗೆ ಈ ಬಾರಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗುವ ಸಾಧ್ಯತೆ ಬಹುತೇಕ ಕ್ಷೀಣಿಸಿದೆ ಎನ್ನಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರೇಸಿನಲ್ಲಿರುವ ಮುಖಂಡರು ಯಾರ್ಯಾರು ಗೊತ್ತಾ ?
ವೀರಶೈವರಿಗೆ ನಾಯಕತ್ವ ನೀಡಬೇಕು. ಬಿಜೆಪಿಯತ್ತ ವಾಲಿರುವ ಲಿಂಗಾಯತರನ್ನು ಪುನಃ ಕಾಂಗ್ರೆಸ್ ನತ್ತ ಒಲಿಸಿಕೊಳ್ಳಲು ಕೆಪಿಸಿಸಿಯಲ್ಲಿ ಬದಲಾವಣೆ ಅನಿವಾರ್ಯ ಎಂದು ಖಾಯಂ ಖಜಾಂಜಿಯೂ ಆಗಿರುವ ದಾವಣಗೆರೆಯ ಶಾಮನೂರು ಶಿವಶಂಕರಪ್ಪ ಅವರು 2012ರಿಂದ ವರಾತ ಹಿಡಿದಿದ್ದಾರೆ. ಅದರೆ, ಅವರಿಗೆ ಅನುಭವವಿದ್ದರೂ ವಯೋವೃದ್ಧರಿಗೆ ಪಟ್ಟ ತಪ್ಪಿ ಮತ್ತೊಬ್ಬ ನಾಯಕರಿಗೆ ಸಿಗುವ ಸಾಧ್ಯತೆಯೇ ಹೆಚ್ಚು. ಡಿಸಿಎಂ ಹುದ್ದೆಯನ್ನು ಲಿಂಗಾಯತರಿಗೆ ನೀಡಬೇಕು ಎಂದು ಮಠಾಧೀಶರಾದಿಯಾಗಿ, ಲಿಂಗಾಯತ ಮುಖಂಡರು ಲಾಬಿ ನಡೆಸಿ ಸೋತಿದ್ದಾರೆ. ಈಗ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ ನಡೆಸುವ ಸಾಧ್ಯತೆಯಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಚಿವ. ಎಂ.ಬಿ. ಪಾಟೀಲ್ ಹಾಗೂ ಹೆಚ್ ಸಿ. ಮಹಾದೇವಪ್ಪ ಹೆಸರುಗಳು ಕೇಳಿ ಬಂದಿತ್ತು, ಸಿಎಂ ಸಿದ್ದರಾಮಯ್ಯ ಒಲವು ಹೊಂದಿದ್ದಾರೆ ಎಂಬ ಸುದ್ದಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್, ಯಾರೇ ಅಧ್ಯಕ್ಷರಾದರೂ ನನಗೆ ಬೇಸರವಿಲ್ಲ. ಸಿದ್ದರಾಮಯ್ಯ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ಬೇಡ ಎಂದು ಎಲ್ಲಿಯೂ ಹೇಳಿಲ್ಲ. ಆದರೆ, ಪಕ್ಷ ಕೊಟ್ಟ ಎಲ್ಲ ಜವಾಬ್ದಾರಿಯನ್ನು ಇದುವರೆಗೂ ಸಮರ್ಥವಾಗಿ ನಾನು ನಿಭಾಯಿಸಿದ್ದೇನೆ. ಈಗಲೂ ನಿರ್ವಹಿಸುತ್ತೇನೆ ಎಂದು ಹೇಳಿದ್ದರು.
ಡಿ.ಕೆ.ಶಿವಕುಮಾರ್ ಅವರ ಹೆಸರು ಹೊರತುಪಡಿಸಿ, ದೆಹಲಿಯಲ್ಲಿ ರಾಜ್ಯದ ಪ್ರತಿನಿಧಿಯಾಗಿರುವ ಅಪ್ಪಾಜಿ ನಾಡಗೌಡ, ಮಾಜಿ ಐಟಿಬಿಟಿ ಸಚಿವ ಎಸ್.ಆರ್.ಪಾಟೀಲ್, ತುಮಕೂರು ಸಂಸದ ಮುದ್ದಹನುಮೇಗೌಡ, ಮೈತ್ರಿ ಸರ್ಕಾರದ ಸಂಪುಟ ಸೇರಲು ಸಿದ್ಧರಾಗಿರುವ ಎಂ.ಬಿ.ಪಾಟೀಲ ಅವರ ಹೆಸರು ಕೇಳಿಬಂದಿದೆ. ಅಲ್ಲದೆ ಮಾಜಿ ಕೇಂದ್ರ ಸಚಿವ ಕೆ.ಮುನಿಯಪ್ಪ ಅವರಿಗೆ ಈ ಮುಂಚೆ ಆಫರ್ ಸಿಕ್ಕಿತ್ತು. ದಲಿತ ವರ್ಗಕ್ಕೆ ಈಗಾಗಲೇ ಪ್ರಾತಿನಿಧ್ಯ ಸಿಕ್ಕಿರುವುದರಿಂದ ಈ ಬಾರಿ ಒಕ್ಕಲಿಗರಿಗೆ ಅವಕಾಶ ನೀಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಹಿರಿಯ ನಾಯಕ ಆರ್.ವಿ ದೇಶಪಾಂಡೆ ಅವರು ಎಚ್.ಡಿ ಕುಮಾರಸ್ವಾಮಿ ಅವರ ಸಂಪುಟ ಸೇರಲು ನಿರಾಕರಿಸಿರುವ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸಂಗತಿ ಹೊರಬಂದಿದೆ. ರಾಮಕೃಷ್ಣ ಹೆಗಡೆ ಮತ್ತು ಎಚ್.ಡಿ ದೇವೇಗೌಡ ಅವರ ಸಚಿವ ಸಂಪುಟದಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವ ದೇಶಪಾಂಡೆ ಅವರು ನೇರವಾಗಿ ತಮ್ಮ ಇಚ್ಛೆಯನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ತಿಳಿಸಿದ್ದಾರೆ ಎಂಬ ಸುದ್ದಿಯಿದೆ.
Comments