ಚುನಾವಣಾ ಕಣದಿಂದ ಹಿಂದೆ ಸರಿದ ಜೆಡಿಎಸ್ ಅಭ್ಯರ್ಥಿ ಯಾರ್ ಗೊತ್ತಾ?

ವಿಧಾನ ಸಭಾ ಚುನಾವಣೆಯು ಜಯನಗರ ಕ್ಷೇತ್ರದಲ್ಲಿ ಇನ್ನೂ ಬಾಕಿ ಉಳಿದಿದೆ. ಜೂನ್ 11ರಂದು ಜಯನಗರ ಕ್ಷೇತ್ರದ ಚುನಾವಣೆ ನಡೆಯಲಿದ್ದು ಚುನಾವಣೆಗೆ ಇನ್ನೂ 5 ದಿನಗಳು ಬಾಕಿ ಇರುವಂತೆಯೇ ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರಿಗೆ ಅಧಿಕೃತವಾಗಿ ಬೆಂಬಲ ಘೋಷಣೆ ಮಾಡಿದೆ. ಈ ಮೂಲಕ ಬಿಜೆಪಿ-ಕಾಂಗ್ರೆಸ್ ನೇರ ಹೋರಾಟಕ್ಕೆ ವೇದಿಕೆ ಸಜ್ಜಾಗಿದೆ.
ಜೆಡಿಎಸ್ ಪಕ್ಷ ಈ ವಿಷಯ ಕುರಿತು ಅಧಿಕೃತವಾದ ಘೋಷಣೆ ಮಾಡಲಾಗಿದೆ. ಜಯನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾದ ಕಾಳೇಗೌಡ ಅವರು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರಿಗೆ ಬೆಂಬಲ ಘೋಷಣೆ ಮಾಡಿದ್ದು, ಕಣದಿಂದ ಹಿಂದೆ ಸರಿಯುವಂತೆ ಪಕ್ಷದ ವರಿಷ್ಠ ಹೆಚ್.ಡಿ. ದೇವೇಗೌಡ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಜೂನ್ 11ರಂದು ಜಯನಗರ ಕ್ಷೇತ್ರದ ಚುನಾವಣೆ ನಡೆಯಲಿದ್ದು, ಜೂನ್ 16ರಂದು ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಜೆಡಿಎಸ್ ಪಕ್ಷ, ಕಾಂಗ್ರೆಸ್ ಬೆಂಬಲಿಸಿರುವುದರಿಂದ ಕ್ಷೇತ್ರದಲ್ಲಿ ಕಾಂಗ್ರೆಸ್-ಬಿಜೆಪಿ ನೇರ ಪೈಪೋಟಿಗೆ ಈಗಾಗಲೇ ವೇದಿಕೆ ಸಜ್ಜಾಗಿದೆ.
Comments