ಕೊನೆಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಫಿಕ್ಸ್: ಹೈಕಮಾಂಡ್ ನ ನಿರ್ಧಾರ ಏನ್ ಗೊತ್ತಾ?
ರಾಜಕೀಯ ವಲಯದಲ್ಲಿ ದಿನದಿಂದ ದಿನಕ್ಕೆ ಕುತೂಹಲಕಾರಿ ವಿಷಯಗಳು ಜೊತೆಗೆ ಮಹತ್ತರವಾದ ಬೆಳವಣಿಗೆ ಕಂಡು ಬರುತ್ತಿವೆ.
ಇದೇ ನಿಟ್ಟಿನಲ್ಲಿ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ಕಾರ್ಯಾಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಪರಿಗಣಿಸಿದ್ದಾರೆ. ಇದರ ಬಗ್ಗೆ ಶೀಘ್ರವೇ ಘೋಷಣೆ ಹೊರಬೀಳಲಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಡಿ.ಕೆ. ಶಿವಕುಮಾರ್, ಕೃಷ್ಣಬೈರೇಗೌಡ, ಎಂ.ಬಿ.ಪಾಟೀಲ್, ಬಿ.ಕೆ.ಹರಿಪ್ರಸಾದ್ ಹಾಗೂ ಕೆ.ಎಚ್.ಮುನಿಯಪ್ಪರಂತಹ ಘಟಾನು ಘಟಿಗಳು ಪೈಪೋಟಿ ನಡೆಸುತ್ತಿದ್ದ ಈ ಸ್ಥಾನ ಪಡೆದುಕೊಳ್ಳುವಲ್ಲಿ ದಿನೇಶ್ ಯಶಸ್ವಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
Comments