Flash News : ಮೈತ್ರಿ ಸರಕಾರದ ಮೊದಲ ಕ್ಯಾಬಿನೆಟ್ ಸಭೆ, ರೈತರ ಸಾಲಮನ್ನಾ ಘೋಷಣೆ?
ಅಂತೂ ಇಂತೂ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಂಪುಟ ರಚನೆ ನೇರವೇರಿದೆ. ಇಂದು ಮಧ್ಯಾಹ್ನ 2.12ಕ್ಕೆ ಕನ್ಯಾ ಲಗ್ನದಲ್ಲಿ ನೂತನ ಸಚಿವರು ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನ ಒಟ್ಟು 25 ಮಂದಿ ನೂತನ ಸಚಿವರಾಗಿ ಪ್ರಮಾಣ ವಚನವನ್ನು ಸ್ವೀಕರಿಸಿದರು.
ಇದೇ ಹಿನ್ನಲೆಯಲ್ಲಿ ಇಂದು ಸಂಜೆ 4:30ಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮೊದಲ ಸಚಿವ ಸಂಪುಟ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆಯು ನಡೆದಿದೆ ಎಂದು ಹೇಳಲಾಗುತ್ತಿದೆ. ಇದೇ ಸಮಯದಲ್ಲಿ ಇಂದು ನಡೆಯಲಿರುವ ನೂತನ ಸಚಿವ ಸಂಪುಟದಲ್ಲಿ ರೈತರ ಬಹುನಿರೀಕ್ಷಿತ ಸಾಲಮನ್ನಾ ಘೋಷಣೆ, ಸೇರಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಚುನಾವಣೆಯಲ್ಲಿ ಘೋಷಣೆ ಮಾಡಿದ್ದ ಕೆಲವು ಯೋಜನೆಗಳ ಬಗ್ಗೆಯೂ ಕೂಡ ಅಧಿಕೃತವಾಗಿ ಜಾರಿಗೆ ತರುವ ಬಗ್ಗೆ ಚರ್ಚೆಯನ್ನು ಮಾಡಲಿದ್ದಾರೆ ಎನ್ನಲಾಗಿದ್ದು, ಸಚಿವ ಸಂಪುಟದ ಬಳಿಕ, ಸಚಿವ ಸಂಪುಟದಲ್ಲಿ ತೆಗೆದುಕೊಂಡ ನಿರ್ಧಾರಗಳನ್ನು ಸಿ.ಎಂ ಎಚ್’ಡಿಕೆ ಯವರು ಮಾಧ್ಯಮ ಸುದ್ದಿಗೋಷ್ಠಿಯಲ್ಲಿ ತಿಳಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
Comments