ಬಿಗ್ ಬ್ರೇಕಿಂಗ್ : ಇವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ..!!



ಕೆಪಿಸಿಸಿ ಅಧ್ಯಕ್ಷರಾಗಿರುವ ಡಾ. ಜಿ. ಪರಮೇಶ್ವರ್ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಆಗಿರುವುದರಿಂದ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯುವ ಸಾಧ್ಯತೆಗಳು ಕಡಿಮೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿಗೆ ಪೂರ್ಣ ಪ್ರಮಾಣದ ಅಧ್ಯಕ್ಷರನ್ನು ನೇಮಿಸುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಗಂಭೀರ ಚಿಂತನೆ ನಡೆಸಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷರಾಗಿರುವ ದಿನೇಶ್ ಗುಂಡೂರಾವ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ. ಹಾಲಿ ಕಾರ್ಯಾಧ್ಯಕ್ಷರಾಗಿರುವ ದಿನೇಶ್ ಗುಂಡೂರಾವ್ ಅವರು ಆರಂಭದಿಂದಲೂ ಸಕ್ರಿಯರಾಗಿದ್ದು, ಪ್ರತಿಪಕ್ಷ ಬಿಜೆಪಿಗೆ ಎದುರೇಟು ಕೊಡುವಲ್ಲಿ ಯಶಸ್ವಿಯಾಗಿದ್ದು, ಪಕ್ಷವನ್ನು ನಿಭಾಯಿಸಬಲ್ಲರು. ಹಿರಿಯರು, ಕಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವರು ಎಂಬ ಅಭಿಪ್ರಾಯ ಹೈಕಮಾಂಡ್ ನಲ್ಲಿದೆ. ಹೀಗಾಗಿ ಅವರನ್ನೇ ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸುವ ಸಾಧ್ಯತೆಗಳಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
Comments