ಆಪರೇಷನ್ ಮಾಡಲು ಹೋಗಿ ಕೈ ಸುಟ್ಟಿಕೊಂಡ ಕಮಲಕ್ಕೆ ಖಡಕ್ ಎಚ್ಚರಿಕೆ

ಆಪರೇಷನ್ ಕಮಲ ಮಾಡಲು ಹೋಗಿ ಬಿಜೆಪಿಯವರು ಈಗಾಗಲೇ ತಮ್ಮ ಕೈಯನ್ನು ತಾವೇ ಸುಟ್ಟುಕೊಂಡಿದ್ದಾರೆ. ಮತ್ತೆ ಈ ರೀತಿ ಏನಾದರೂ ಮಾಡಲು ಬಂದರೆ ಅದು ಸಾಧ್ಯವಾಗದು. ಮೊದಲು ಬಿಜೆಪಿಯವರು ತಮ್ಮೊಳಗಿನ ಅಸಮಾಧಾನ ಬಗೆಹರಿಸಿಕೊಳ್ಳಲಿ ಎಂದು ಸಿದ್ದರಾಮಯ್ಯ ಕಿಡಿಕಾರಿದರು.
ಸಚಿವ ಸಂಪುಟ ವಿಸ್ತರಣೆ ವೇಳೆ ಅಸಮಾಧಾನ ಉಂಟಾಗುವುದೆಲ್ಲ ಸಹಜ. ಹಾಗಂತ ಯಾರೂ ಪಕ್ಷ ಬಿಟ್ಟು ಹೋಗಲ್ಲ, ಎಲ್ಲರನ್ನೂ ಸಮಾಧಾನಪಡಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಾದಾಮಿ ತಾಲೂಕಿನ ಹಿರೆಮುಚ್ಚಳಗುಡ್ಡ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಅಧಿಕಾರದ ಆಸೆ ಇದ್ದವರಿಗೆ ಸಚಿವ ಸ್ಥಾನ ಸಿಗದಿದ್ದಾಗ ಅಸಮಾಧಾನ ಆಗುತ್ತದೆ. ಇದರಲ್ಲಿ ವಿಶೇಷವೇನೂ ಇಲ್ಲ. ಆದರೆ, ಯಾರೂ ಪಕ್ಷ ಬಿಟ್ಟು ಹೋಗಲ್ಲ. ಎಲ್ಲರೂ ಪಕ್ಷದಲ್ಲೇ ಇರುತ್ತಾರೆ. ಸಚಿವ ಸ್ಥಾನ ಸಿಗದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸಚಿವ ಎಂ.ಬಿ. ಪಾಟೀಲರನ್ನು ಸಮಾಧಾನ ಮಾಡಿದ್ದೇನೆ. ಅದು ಯಾವ ರೀತಿ ಅಂತ ಹೇಳಲು ಆಗಲ್ಲ. ಅದು ನನಗೆ ಮತ್ತು ಅವರ ನಡುವಿನ ವಿಚಾರ ಎಂದು ತಿಳಿಸಿದರು.
Comments