ಮಾಜಿ ಪ್ರಧಾನಿ ವಾಜಪೇಯಿ ಏಮ್ಸ್ ಆಸ್ಪತ್ರೆಗೆ ದಾಖಲು

11 Jun 2018 2:12 PM | Politics
442 Report

ಭಾರತದ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರನ್ನು ರಾಜಧಾನಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಹು ದಿನಗಳಿಂದ ವಾಜಪೇಯಿಯವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಅವರನ್ನು ದೆಹಲಿಯ ಪ್ರತಿಷ್ಠಿತ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಿರುವುದಾಗಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ದೈನಂದಿನ ತಪಾಸಣೆಗಾಗಿ ವಾಜಪೇಯಿಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಡಾ.ರಣ್'ದೀಪ್ ಗುಲಾರಿಯಾ ಅವರು ವಾಜಪೇಯಿಯವರ ಆರೋಗ್ಯದ ಬಗ್ಗೆ ನಿಗಾವಹಿಸಿದ್ದಾರೆಂದು ಹೇಳಲಾಗುತ್ತಿದೆ.

 

Edited By

Shruthi G

Reported By

Shruthi G

Comments