ರಾಜ್ಯ ರೈತರಿಗೆ ಬಜೆಟ್ ನಲ್ಲಿ ಸಿಗಲಿದ್ಯಾ ಗುಡ್ ನ್ಯೂಸ್..? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್...

ಚುನಾವಣೆಗೂ ಮುನ್ನ ಜೆಡಿಎಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ರೈತರ ಸಾಲ ಮನ್ನಾ ಮಾಡಲಿದ್ದಾರೆಂಬ ನಿರೀಕ್ಷೆ ಇನ್ನೂ ಕೂಡ ಕಾರ್ಯರೂಪಕ್ಕೆ ಬಂದಿಲ್ಲ.
ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ರಾಜ್ಯದ ರೈತ ಮುಖಂಡರ ಸಭೆ ನಡೆಸಿದ್ದ ಕುಮಾರಸ್ವಾಮಿಯವರು ಇನ್ನು 15 ದಿನಗಳಲ್ಲಿ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದರು. ಆದರೆ ಇದೀಗ ಬಜೆಟ್ ನಲ್ಲಿ ಇದನ್ನು ಪ್ರಕಟಿಸುವುದಾಗಿ ಹೇಳಿದ್ದಾರೆ. ಮಾಧ್ಯಮ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ರೈತರ ಸಾಲ ಮನ್ನಾ ಮಾಡುವುದು ಖಚಿತ. ತಮ್ಮ ನಿರ್ಧಾರದಿಂದ ನಾವು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಈ ಕುರಿತು ಈಗಾಗಲೇ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದೇನೆ. ಬಜೆಟ್ ನಲ್ಲಿ ಎಷ್ಟು ಪ್ರಮಾಣದಲ್ಲಿ ಸಾಲ ಮನ್ನಾ ಮಾಡಲಾಗುವುದು ಎಂಬ ನಿರ್ಧಾರವನ್ನು ಕೂಡ ಪ್ರಕಟಿಸಲಿದ್ದೇನೆ ಎಂದು ಹೇಳಿದ್ದಾರೆ.
Comments