ಸಚಿವ ಡಿ.ಕೆ ಶಿವಕುಮಾರ್ ಗೆ ಎದುರಾಗಿದೆ ಮತ್ತೊಂದು ಸಂಕಷ್ಟ..!

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಟ್ರಬಲ್ ಶೂಟರ್ ಎಂದೇ ಖ್ಯಾತರಾಗಿರುವ ಡಿ.ಕೆ ಶಿವಕುಮಾರ್ ಅವರಿಗೆ ಇದೀಗ ಸಂಕಷ್ಟ ಬಂದೊದಗಿದೆ. ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಿ.ಕೆ.ಶಿವಕುಮಾರ್ ವಿರುದ್ಧ ಇದೀಗ ಐಟಿ ಇಲಾಖೆಯಿಂದ ಮತ್ತೊಂದು ದೂರು ದಾಖಲಾಗಿದೆ ಎನ್ನಲಾಗುತ್ತಿದೆ.
ಡಿ.ಕೆ. ಶಿ. ವಿರುದ್ಧ ಈಗಾಗಲೇ 3 ಕೇಸ್ಗಳು ದಾಖಲಿಸಲಾಗಿದ್ದು, ಇದೀಗ ಮತ್ತೊಂದು ದೂರು ದಾಖಲಾಗಿದೆ. ಕೋಟ್ಯಾಂತರ ರೂಪಾಯಿ ವ್ಯವಹಾರ ಮುಚ್ಚಿಟ್ಟು ತೆರಿಗೆ ವಂಚನೆ ಮಾಡಿದ ಆರೋಪದ ಅಡಿಯಲ್ಲಿ ಐಟಿ ಇಲಾಖೆ ಅಧಿಕಾರಿಗಳಿಂದ ಆರ್ಥಿಕ ಅಪರಾಧ ನ್ಯಾಯಾಲಯದಲ್ಲಿ ದೂರನ್ನು ದಾಖಲಿಸಲಾಗಿದೆ. ಐಟಿ ಕಾಯಿದೆ ಸೆಕ್ಷನ್ 277, 278 ಹಾಗೂ ಐಪಿಸಿ ಸೆಕ್ಷನ್ 193, 199, 120(ಬಿ) ಅಡಿ ದೂರು ದಾಖಲಾಗಿದೆ. ಡಿ.ಕೆ.ಶಿ ಸಚಿನ್ ನಾರಾಯಣ್, ಸುನಿಲ್ ಕುಮಾರ್ ಶರ್ಮಾ, ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರ ವಿರುದ್ಧ ದೂರು ದಾಖಲಾಗಿದ್ದು, ಸಮನ್ಸ್ ಅನ್ನುಜಾರಿ ಮಾಡಲಾಗಿದೆ. ಆಗಸ್ಟ್ 2 ರಂದು ಡಿಕೆಶಿ ಜೊತೆಗೆ ಎಲ್ಲಾ ಆರೋಪಿಗಳು ಖುದ್ದು ಹಾಜರಾಗುವಂತೆ ಸಮನ್ಸ್ ನಲ್ಲಿ ತಿಳಿಸಲಾಗಿದೆ.
Comments