ನಿಮ್ಮ ಬಳ್ಳಿ BPL card ಇದ್ಯಾ? ಹಾಗಾದ್ರೆ ಸಿಕ್ತು ಅನ್ಕೊಳ್ಳಿ ಈ ಬಂಪರ್ ಗಿಫ್ಟ್..!!
ಬಿ.ಪಿ.ಎಲ್ ಕಾರ್ಡ್ ದಾರರಿಗೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್ ಅಹಮದ್ ಖಾನ್ ಶುಭ ಸುದ್ದಿಯೊಂದನ್ನು ನೀಡಿದ್ದಾರೆ. ಬಿ.ಪಿ.ಎಲ್ ಪಡಿತರ ಚೀಟಿಗೆ ಆಧಾರ್ ಸಂಖ್ಯೆ ಜೋಡಿಸದೆ ಇರುವವರಿಗೆ ಮತ್ತೊಂದು ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಬಿ.ಪಿ.ಎಲ್ ಕಾರ್ಡ್ ಹೊಂದಿದ ಬಹಳಷ್ಟು ಮಂದಿ, ಈ ಹಿಂದೆ ಹಲವು ಅವಕಾಶಗಳನ್ನು ನೀಡಿದರೂ ತಮ್ಮ ಪಡಿತರ ಚೀಟಿಯನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಿರಲಿಲ್ಲ. ಇದರಿಂದಾಗಿ ಪಡಿತರ ವಿತರಣೆಗೂ ತೊಂದರೆಯಾಗುತ್ತಿದ್ದು, ಈಗ ಮತ್ತೊಂದು ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಅನ್ನಭಾಗ್ಯ ಯೋಜನೆಯಲ್ಲಿ ಪ್ರತಿ ವ್ಯಕ್ತಿಗೆ ನೀಡುವ ಅಕ್ಕಿ ಪ್ರಮಾಣ ಎರಡು ಕೆಜೆ ಹೆಚ್ಚಿಸುವ ಪ್ರಸ್ತಾಪವಿದೆ. ಶೀಘ್ರವೇ ನಿರ್ಧಾರಕ್ಕೆ ಬರುತ್ತೇವೆ ಎಂದು ಜಮೀರ್ ಅಹ್ಮದ್ ತಿಳಿಸಿದ್ದಾರೆ ಅವರು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಇದೇ ವೇಳೆ ಅವರು ಮಾತನಾಡಿ ಮಾರುಕಟ್ಟೆಯಲ್ಲಿ 19 ರೂ.ಗೆ ಸಿಗುವ ಕೆಜಿ ರಾಗಿಯನ್ನು 25.47 ರೂ. ಖರೀದಿಸುತ್ತಿರುವ ಇಲಾಖೆ ಕ್ರಮವನ್ನು ಪರಿಶೀಲಿಸಲಾಗುವುದು. ಹೆಚ್ಚಿನ ವೆಚ್ಚದ ಖರೀದಿಗೆ ಕಡಿವಾಣ ಹಾಕಲಾಗುವುದು ಎಂದು ಅವರು ಹೇಳಿದ್ದಾರೆ.
Comments