ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದ ಸಿಎಂ ಎಚ್’ಡಿಕೆ- ಜಮೀರ್ ಭೇಟಿ..!! ಯೂ-ಟರ್ನ್ ಹೊಡುದ್ರಾ ಜಮೀರ್..?!

ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಜೆಡಿಎಸ್ ನಲ್ಲಿದ್ದಾಗ ಎಚ್ ಡಿ ಕುಮಾರಸ್ವಾಮಿಯವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ವಿಧಾನಸಭೆಯ ಚುನಾವಣೆಯ ನಂತರ ಬದಲಾದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ಜೆಡಿಎಸ್ ಗೆ ಬೆಂಬಲ ಘೋಷಿಸಿದ ಕಾರಣ ಎಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ಇದರಿಂದ ಬಂಡಾಯ ಶಾಸಕರಿಗೆ ಕಸಿವಿಸಿಯಾದಂತಾಗಿದೆ.
ಕಾಂಗ್ರೆಸ್ ಮುಖಂಡ ಜಮೀರ್ ಅಹ್ಮದ್ ಅವರು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. ರಂಜಾನ್ ನಿಮಿತ್ತ ಮೆಕ್ಕಾ ಯಾತ್ರೆಗೆ ತೆರಳಿದ್ದ ಜಮೀರ್ ಅಹ್ಮದ್, ಕುಮಾರಸ್ವಾಮಿ ಅವರ ಪರವಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದೀಗ ಅವರನ್ನು ಭೇಟಿಯಾಗಿ ಸುಮಾರು ಅರ್ಧ ಗಂಟೆಗಳ ಕಾಲ ಮಾತನಾಡಿರುವುದು ಕಾಂಗ್ರೆಸ್ಸಿಗರಲ್ಲಿ ತಲ್ಲಣವೆಬ್ಬಿಸಿದೆ.
Comments