ಬಿಗ್ ಬ್ರೇಕಿಂಗ್ : ರಾಜಕೀಯ ವಲಯದಲ್ಲಿ ಮೂಡಿದೆ ಹೊಸ ಸಂಚಲನ, ಡೈರಿ ಬಗ್ಗೆ ರೋಚಕ ರಹಸ್ಯ ಬಿಚ್ಚಿಟ್ಟ ಡಿಕೆಶಿ

20 Jun 2018 4:57 PM | Politics
10746 Report

ವಿಧಾನಸೌಧದಲ್ಲಿ ಮಾತನಾಡಿದ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು, ಐಟಿ ನೋಟಿಸ್ ಜಾರಿ ಹಿನ್ನೆಲೆ ಈ ರೀತಿ ಪ್ರತಿಕ್ರಿಯಿಸಿದ್ದಾರೆ. ನನ್ನನ್ನ ಹೆದರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಡಿಕೆಶಿ ಯಾವುದಕ್ಕೂ ಹೆದರುವುದಿಲ್ಲ. ನಾನು ಕಾನೂನಿಗೆ ಬೆಲೆ ಕೊಡುವವನು. ಪ್ರಕರಣ ಈಗ ಕೋರ್ಟ್‌ನಲ್ಲಿ ಇರೋದ್ರಿಂದ ಈಗ ಏನು ಹೇಳೋದಿಲ್ಲ. ಇಲ್ಲವಾಗಿದ್ದರೆ ನಾನೇನು ಅನ್ನೋದನ್ನ ತೋರಿಸುತ್ತಿದ್ದೆ.

ನನ್ನ ಬಳಿಯೂ ಕೆಲವರ ಡೈರಿಗಳಿವೆ. ಯಾರು ಯಾರಿಗೆ ಏನೇನು ಬರೆದಿದ್ದಾರೆ ಅನ್ನೋದು ಗೊತ್ತಿದೆ. ಕೊನೆಯಲ್ಲಿ ಏನೂ ಆಗಲ್ಲವೆಂದಾಗ ಅದನ್ನ ಬಹಿರಂಗ ಮಾಡುತ್ತೇನೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದರು. ಯಾರೋ ಏನೋ ಹೇಳಿಕೆ ಕೊಟ್ಟರು ಅಂತ ನನ್ನನ್ನು ಸಿಕ್ಕಿಸೋಕೆ ಆಗಲ್ಲ. ಇದೆಲ್ಲಾ ಯಾಕೆ ಮಾಡ್ತಿದ್ದಾರೆ ಅನ್ನೋದು ಗೊತ್ತಿದೆ. ಖುದ್ದಾಗಿ ವಿಚಾರಣೆಗೆ ಹಾಜರಾಗಬೇಕೆಂದು ನನಗೆ, ತಾಯಿಗೆ, ಸಹೋದರನಿಗೆ ನೊಟೀಸ್ ಬಂದಿದೆ. ಇನ್ನೆರಡು ದಿನಗಳಲ್ಲಿ ನ್ಯಾಯಾಲಯದಿಂದ ಸಮನ್ಸ್ ಬರಬಹುದು. ಪೋಸ್ಟಲ್ ಮೂಲಕ ಸಮನ್ಸ್ ಬರಬಹುದು. ವಿಚಾರಣೆಗೆ ಹಾಜರಾಗುತ್ತೇವೆ. ನಮಗೆ ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದು ಸಚಿವ ಡಿಕೆಶಿ ಸ್ಪಷ್ಟಪಡಿಸಿದರು. ನಾನು ರಾಜೀನಾಮೆ ಕೊಡಬೇಕೆಂದು ಬಿಜೆಪಿ ಆಗ್ರಹಿಸುತ್ತಿದೆ. ಬಿಜೆಪಿ ಸ್ನೇಹಿತರ ಮೇಲೆ ಇರುವ ಪ್ರಕರಣಗಳನ್ನು ಅವರಿಗೆ ನೆನಪಿಸಬೇಕಾ? ಬಿಜೆಪಿ ಯಾರನ್ನು ಮುಖ್ಯಮಂತ್ರಿ ಮಾಡಬೇಕೆಂದು ಇದ್ರೋ ಅವರ ಮೇಲೆ ಹಲವು ಪ್ರಕರಣಗಳು ಇದಾವೆ. ಅದೆಲ್ಲ ಅವರಿಗೆ ಗೊತ್ತಿಲ್ವಾ ಎಂದು ಪ್ರಶ್ನಿಸಿದರು.

Edited By

Shruthi G

Reported By

Shruthi G

Comments