ಮೈತ್ರಿ ಸರ್ಕಾರಕ್ಕೆ ಎದುರಾಗಿದೆ ಮೊದಲ ಸಂಕಷ್ಟ..!
ಸ್ವಲ್ಪ ದಿನಗಳ ಹಿಂದಷ್ಟೇ ಅಸ್ತಿತ್ವಕ್ಕೆ ಬಂದಿರುವಂತಹ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರಕ್ಕೆ ಮೊದಲ ಸಂಕಷ್ಟವು ಎದುರಾಗಿದೆ. ಸಚಿವ ಡಿ.ಕೆ. ಶಿವಕುಮಾರ್ ಅವರ ಹೆಸರು ಸುಳಿಯಲ್ಲಿ ಸಿಲುಕಿರುವುದು ಸಿಎಂ ಕುಮಾರಸ್ವಾಮಿಯವರಿಗೆ ಸಂದಿಗ್ಧ ಪರಿಸ್ಥಿತಿಯನ್ನು ತಂದೊಡ್ಡಿದಂತಾಗಿದೆ.
ಈ ಹಿನ್ನೆಲೆಯಲ್ಲಿಯೇ ವಿಧಾನಸೌಧದ ಸಭೆಯನ್ನು ಮೊಟಕುಗೊಳಿಸಿರುವಂತಹ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಮಾತುಕತೆಯನ್ನು ನಡೆಸಲು ಮುಂದಾಗಿದ್ದು ಪದ್ಮನಾಭನಗರ ನಿವಾಸಕ್ಕೆ ತೆರಳಿದ್ದಾರೆಂದು ಹೇಳಲಾಗುತ್ತಿದೆ.ಇದರ ಜೊತೆಗೆ ಸಚಿವ ಹೆಚ್.ಡಿ. ರೇವಣ್ಣ ಸಹ ಜೊತೆಯಾಗುದ್ದು, ಐಟಿ ಇಲಾಖೆ ನೋಟೀಸ್ ನಿಂದಾಗಿ ಮುಂದಿನ ದಿನಗಳಲ್ಲಿ ಸರ್ಕಾರದ ಮೇಲೆ ಯಾವ ಪರಿಣಾಮ ಬೀರಬಹುದು ಎನ್ನುವ ಕುರಿತು ಸಮಾಲೋಚನೆಯನ್ನು ನಡೆಸಲಾಗಿದೆ ಎಂದು ತಿಳಿಸಲಾಗುತ್ತಿದೆ. ಈ ನಡುವೆ ಡಿ.ಕೆ. ಶಿವಕುಮಾರ್ ಅವರಿಗೆ ಸಮನ್ಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷ ಬಿಜೆಪಿ ಮುಖಂಡರು, ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಇದಕ್ಕೆ ಕಿಡಿಕಾರಿರುವ ಡಿ.ಕೆ. ಶಿವಕುಮಾರ್, ತಮ್ಮ ಬಳಿಯೂ ಕೂಡ ಸಾಕಷ್ಟು ಡೈರಿಗಳಿವೆ. ಸಮಯ ಬಂದಾಗ ನಾನು ಕೂಡ ಬಹಿರಂಗಪಡಿಸಲಿದ್ದೇನೆ ಎಂದು ಹೇಳುವ ಮೂಲಕ ವಿರೋಧಿಗಳಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.
Comments