ನೂತನ ಸರ್ಕಾರದ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಹೊಸ ಬಜೆಟ್ ಮಂಡನೆಗೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಇದೀಗ ಸಜ್ಜಾಗಿದ್ದಾರೆ.
ಜುಲೈ 5 ರಂದು ಮೈತ್ರಿ ಸರ್ಕಾರದ ಹೊಸ ಬಜೆಟ್ ಮಂಡನೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಗುರುವಾರದಂದು ಬಜೆಟ್ ಮಂಡನೆಯ ಪೂರ್ವಭಾವಿ ಸಭೆಗಳನ್ನು ನಡೆಸಿದ್ದಾರೆ. ಹೊಸ ಬಜೆಟ್ ನಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳನ್ನು ಮುಂದುವರಿಸಿಕೊಂಡು ಹೋಗುವ ಜೊತೆಗೆ ಜೆಡಿಎಸ್, ತನ್ನ ಪ್ರಣಾಳಿಕೆಯಲ್ಲಿ ಹೇಳಿದ್ದ ರೈತರ ಸಾಲ ಮನ್ನಾ ಸೇರಿದಂತೆ ಹಲವು ರೀತಿಯ ಯೋಜನೆಗಳನ್ನು ಘೋಷಿಸುವ ಸಾಧ್ಯತೆಯಿದೆ. ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿಯವರು ಕುಮಾರಸ್ವಾಮಿಯವರ ಮಾತಿಗೆ ಸಹಮತ ವ್ಯಕ್ತಪಡಿಸಿದ್ದಾರೆ, ಜುಲೈ 5 ರಂದು ಹೊಸ ಬಜೆಟ್ ಮಂಡನೆಯಾಗಲಿದೆ.
Comments