Breaking News : ಹಾಸನದ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮುಂದುವರಿಕೆ

ವರ್ಗಾವಣೆ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಅರ್ಜಿಯನ್ನು ಸೋಮವಾರ ಇತ್ಯರ್ಥಪಡಿಸಿದ್ದು, ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯುವಂತೆ ಹೈಕೋರ್ಟ್ ಆದೇಶ ನೀಡಿದೆ.
ರೋಹಿಣಿ ಸಿಂಧೂರಿ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯಲು ಮೈತ್ರಿ ಸರ್ಕಾರ ನಿರ್ಧರಿಸಿದೆ ಎಂದು ಹೆಚ್ಚುವರಿ ಅಡ್ವೋಕೇಟ್ ಜನರಲ್ ಪೊನ್ನಣ್ಣ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮಾಹಿತಿ ನೀಡಿದ್ದರು. ಹಾಸನದ ಹಾಲಿ ಜಿಲ್ಲಾಧಿಕಾರಿಯವರು ನ್ಯಾಯಾಲಯದ ಆದೇಶ ಪಾಲಿಸುವುದಾಗಿ ರಂದೀಪ್ ಪರ ವಕೀಲರು ತಿಳಿಸಿದ್ದಾರೆ. ರೋಹಿಣಿ ಸಿಂಧೂರಿಯವರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುವ ಬಗ್ಗೆ ಮೈತ್ರಿ ಸರ್ಕಾರ ಶೀಘ್ರವೇ ಆದೇಶ ಹೊರಡಿಸಲಿದೆ ಎಂದು ಎಎಜಿ ಪೊನ್ನಣ್ಣ ಕೋರ್ಟ್ ಗೆ ಮಾಹಿತಿ ನೀಡಿದರು.
Comments