ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನ ಹೇಳಿಕೆ ನೀಡಿರುವ ಹಿನ್ನಲೆ ಹೈಕಮಾಂಡ್ ನ ಈ ಖಡಕ್ ಸೂಚನೆಗೆ ಬೆಚ್ಚಿಬಿದ್ದ ಸಿದ್ದು..!!

ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರದ ವಿರುದ್ಧ ಆಪ್ತರ ಮುಂದೆ ಅಸಮಾಧಾನ ವ್ಯಕ್ತಪಡಿಸುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೈಕಮಾಂಡ್ ಸೂಚನೆ ಹಿನ್ನಲೆಯಲ್ಲಿ ಮೌನಕ್ಕೆ ಶರಣಾಗಿದ್ದಾರಾ ಎಂಬ ಪ್ರಶ್ನೆ ಮೂಡಿದೆ.
ಚಿಕಿತ್ಸೆಗಾಗಿ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯಕ್ಕೆ ದಾಖಲಾಗಿದ್ದ ಸಿದ್ದರಾಮಯ್ಯ, ಅಲ್ಲಿಯೇ ಆಪ್ತ ಶಾಸಕರ ಸಭೆ ನಡೆಸುವ ಮೂಲಕ ಮೈತ್ರಿಕೂಟ ಸರ್ಕಾರದ ಕಳವಳಕ್ಕೆ ಕಾರಣವಾಗಿದ್ದರು. ಅಲ್ಲದೆ ಹೊಸ ಸರ್ಕಾರದ ಆಯುಷ್ಯದ ಕುರಿತು ಸಿದ್ದರಾಮಯ್ಯ ಆಡಿದ ಮಾತುಗಳು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದ್ದವು. ಹನ್ನೆರಡು ದಿನಗಳ ಚಿಕಿತ್ಸೆ ಬಳಿಕ ಸಿದ್ದರಾಮಯ್ಯನವರು ಈಗ ಮರಳಿ ಬೆಂಗಳೂರಿಗೆ ಬಂದಿದ್ದು, ಇನ್ಯಾವ ರಾಜಕೀಯ ನಡೆ ಅನುಸರಿಸಲಿದ್ದಾರೆ ಎಂಬ ಪ್ರಶ್ನೆ ಕೇಳಿ ಬಂದಿತ್ತು. ಆದರೆ ಸಿದ್ದರಾಮಯ್ಯನವರು ಗುರುವಾರದಂದು ಮಾಧ್ಯಮದವರ ಯಾವುದೇ ಪ್ರಶ್ನೆಗಳಿಗೆ ಉತ್ತರಿಸದೆ ಮೌನಕ್ಕೆ ಶರಣಾಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯನವರಿಗೆ ಈ ಕುರಿತು ಸೂಚನೆ ನೀಡಿದೆ ಎನ್ನಲಾಗಿದ್ದು, ಜೊತೆಗೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿದ್ದರಾಮಯ್ಯನವರೊಂದಿಗೆ ಮಾತುಕತೆ ನಡೆಸುವ ಮೂಲಕ ಸಮಸ್ಯೆ ಇತ್ಯರ್ಥಪಡಿಸಲು ತಿಳಿಸಿದೆ ಎನ್ನಲಾಗಿದೆ.
Comments