Flash News : ಸಚಿವ ಸಂಪುಟ ವಿಸ್ತರಣೆಗೆ ಮೂಹೂರ್ತ ಫಿಕ್ಸ್..! ಈ ಐವರಿಗೆ ಒಲಿಯಲಿದೆ ಸಚಿವ ಸ್ಥಾನ..!?



ಬಜೆಟ್ ಅಧಿವೇಶನಕ್ಕೂ ಮುನ್ನವೇ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ಐವರನ್ನು ಹೊಸದಾಗಿ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್‍ನಿಂದ ರಾಮಲಿಂಗಾರೆಡ್ಡಿ, ಎಂ.ಬಿ.ಪಾಟೀಲ್, ಸಿ.ಎಸ್.ಶಿವಳ್ಳಿ, ತುಕಾರಾಂ, ಬಿ.ಕೆ.ಸಂಗಮೇಶ್ ಅಥವಾ ಬಿ.ಸಿ.ಪಾಟೀಲ್ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳುವ ಸಾಧ್ಯತೆಯಿದ್ದು, ಜುಲೈ 1ರಂದು ಸಂಪುಟ ವಿಸ್ತರಣೆ ಮಾಡಿ ಐವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಸಾಧ್ಯತೆ ಇದೆ.
ಇಂದು ಸಂಜೆ ರಾಜ್ಯಕ್ಕೆ ಆಗಮಿಸಲಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಪಕ್ಷದ ಉಸ್ತುವಾರಿ ವೇಣುಗೋಪಾಲ್ ರಾಜ್ಯ ಕಾಂಗ್ರೆಸ್ ಮುಖಂಡರೊಂದಿಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಿದ್ದಾರೆ. ಹಿರಿಯ ಮುಖಂಡರಾದ ಖರ್ಗೆ ಅವರು ಕೂಡ ಇಂದು ಬೆಂಗಳೂರಿಗೆ ಬರುವ ಸಾಧ್ಯತೆ ಇದ್ದು, ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ. ಕಾಂಗ್ರೆಸ್ ಹೈಕಮಾಂಡ್‍ನಿಂದ ಮುಖ್ಯಮಂತ್ರಿಯವರಿಗೆ ಹೆಸರುಗಳನ್ನು ಕಳುಹಿಸಿಕೊಟ್ಟರೆ ಒಂದು ದಿನದಲ್ಲಿ ಈ ಪ್ರಕ್ರಿಯೆ ನಡೆದು ಹೋಗುತ್ತದೆ. ಬಜೆಟ್ ಅಧಿವೇಶನಕ್ಕೆ ಮುನ್ನವೇ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಜುಲೈ 2ರಿಂದ ಬಜೆಟ್ ಅಧಿವೇಶನ ಪ್ರಾರಂಭವಾಗಲಿದ್ದು, ಜುಲೈ 1ರಂದು ಸಂಪುಟ ವಿಸ್ತರಣೆ ಆಗಲಿದೆ ಎಂದು ಹೇಳಲಾಗುತ್ತಿದೆ. ಬಜೆಟ್ ಅಧಿವೇಶನದ ನಂತರ ನಿಗಮ-ಮಂಡಳಿಗಳು ಅಧ್ಯಕ್ಷರ ನೇಮಕ ಮಾಡಲು ಮೈತ್ರಿ ಸರ್ಕಾರ ನಿರ್ಧರಿಸಿದೆ.
Comments