ಲೋಕಸಭಾ ಚುನಾವಣೆ ಹಿನ್ನಲೆ ವಿಪಕ್ಷವನ್ನ ಹಣಿಯಲು ಬಿಜೆಪಿಯ ಹೊಸ ಹಸ್ತ್ರ..! ಏನ್ ಗೊತ್ತಾ?

ಮುಂಬರುವ 2019 ರ ಲೋಕಸಭಾ ಚುನಾವಣೆಗೆ ವಿಪಕ್ಷವನ್ನ ಹಣಿಯಲು ಬಿಜೆಪಿ ಹೊಸ ರೀತಿಯ ತಂತ್ರಗಾರಿಕೆ ಪ್ರಯೋಗಿಸಲು ನಿರ್ಧರಿಸಲಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನವರಿಗೆ ಚುನಾವಣೆಯ ಸಂಪೂರ್ಣ ಅಧಿಕಾರ ನೀಡಲು ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.
ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರ ವೇಗಕ್ಕೆ ಬ್ರೇಕ್ ಹಾಕಿತ್ತು. ಹೀಗಾಗಿ ಬಿಜೆಪಿ ಗೆಲುವಿನ ಸನಿಹದಲ್ಲಿ ಎಡವಿತ್ತು. ಇದರಿಂದ ಪಾಠ ಕಲಿತಿರುವ ಬಿಜೆಪಿ ಲೋಕಸಭೆ ಚುನಾವಣೆಯಲ್ಲಿ ತನ್ನ ಹಳೆಯ ತಂತ್ರಗಾರಿಕೆಗಳನ್ನು ಬದಿಗಿಟ್ಟು ಚುನಾವಣೆಯ ಉಸ್ತುವಾರಿಯನ್ನು ಬಿ.ಎಸ್.ವೈ ಗೆ ವಹಿಸಲು ನಿರ್ಧರಿಸಿದೆ ಎನ್ನಲಾಗಿದೆ. ಲೋಕಸಭೆ ಚುನಾವಣೆಯಲ್ಲಿ 20 ಕ್ಷೇತ್ರಗಳಲ್ಲಿ ಗೆಲ್ಲಲೇಬೇಕೆಂಬ ಗುರಿ ಹೊಂದಿರುವ ಬಿಜೆಪಿ ಹೈಕಮಾಂಡ್ ಚುನಾವಣೆ ಸಿದ್ದತೆ, ಅಭ್ಯರ್ಥಿ ಆಯ್ಕೆ ಪ್ರಚಾರ ತಂತ್ರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಅಧಿಕಾರವನ್ನು ಯಡಿಯೂರಪ್ಪ ನವರಿಗೆ ನೀಡಬೇಕೆಂದು ಹೈಕಮಾಂಡ್ ನಿರ್ಧರಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
Comments