ಬಿಗ್ ಬ್ರೇಕಿಂಗ್ : ಭಾರೀ ಕೂತುಹಲ ಮೂಡಿಸಿದ್ದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಆಯ್ಕೆ ಫೈನಲ್..!ಇಂದು ಅಧಿಕೃತ ಘೋಷಣೆ..!!



ಎರಡು ವರ್ಷಗಳಿಂದ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರಿಗೆ ಇದೀಗ ಕೆಪಿಸಿಸಿ ಅಧ್ಯಕ್ಷನ ಪಟ್ಟ ಒಲಿದಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ 2 ವರ್ಷಗಳ ಅವಧಿಗೆ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು.
ಹೌದು..ಭಾರೀ ಕೂತುಹಲ ಮೂಡಿಸಿದ್ದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡುರಾವ್ ನೇಮಕವಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಎಐಸಿಸಿಯಿಂದ ಅಧಿಕೃತ ಪ್ರಕಟಣೆ ಹೊರ ಬೀಳಲಿದೆ ಎಂದು ಮೂಲಗಳು ತಿಳಿಸಿವೆ. ಮುಂಬರುವ ಲೋಕಸಭಾ ಚುನಾವಣೆ ಉಸ್ತುವಾರಿಯನ್ನು ಯುವಕರಿಗೆ ನೀಡುವ ನಿಟ್ಟಿನಲ್ಲಿ ದಿನೇಶ್ ಗುಂಡುರಾವ್ ಅವರಿಗೆ ಕೆಪಿಸಿಸಿ ಅಧ್ಯಕ್ಷಸ್ಥಾನವನ್ನು ಕಾಂಗ್ರೆಸ್ ಹೈಕಮಾಂಡ್ ನೀಡಲಾಗಿದೆ ಎನ್ನಲಾಗಿದೆ. ಸಚಿವ ಸ್ಥಾನ ಸಿಗದಕ್ಕೆ ಬೇಸರಗೊಂಡಿದ್ದ ಭಾಲ್ಕಿ ಶಾಸಕ ಹಾಗೂ ಮಾಜಿ ಸಚಿವ ಈಶ್ವರ ಖಂಡ್ರೆ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ ಎಂದು ತಿಳಿದು ಬಂದಿದೆ.
Comments