ಸ್ಪೋಟಕ ಸುದ್ದಿ : ಲೋಕಸಭೆ ಚುನಾವಣೆಗೆ ಬಿಜೆಪಿಯ ಓಟಕ್ಕೆ ಬ್ರೇಕ್ ಹಾಕಲು ಜೆಡಿಎಸ್ ಗೆ ಕಾಂಗ್ರೆಸ್ ಬಿಟ್ಟು ಕೊಟ್ಟ ಈ ಕ್ಷೇತ್ರಗಳು..! ಯಾವ ಯಾವ ಕ್ಷೇತ್ರ ಗೊತ್ತಾ?

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರ ನಡೆಸುತ್ತಿದ್ದು, ಈ ಮೈತ್ರಿಯನ್ನು ಮುಂದಿನ ಲೋಕಸಭೆ ಚುನಾವಣೆಗೂ ಇರಲಿದೆ ಎನ್ನಲಾಗಿದ್ದು, 2019 ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಯೊಂದಿಗೆ ಚುನಾವಣೆ ಎದುರಿಸಲು ಉಭಯ ಪಕ್ಷಗಳ ಮುಖಂಡರ ಮಾತುಕತೆ ನಡೆದಿದ್ದು, ಒಪ್ಪಿಗೆ ದೊರೆತಿದೆ ಎನ್ನಲಾಗಿದೆ.
ಇನ್ನು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಕರ್ನಾಟಕದಲ್ಲಿ ಅತಿಹೆಚ್ಚು ಸ್ಥಾನ ಗಳಿಸಬೇಕು ಎಂಬ ಗುರಿ ಹೊಂದಿರುವ ಬಿಜೆಪಿಯ ಓಟಕ್ಕೆ ಬ್ರೇಕ್ ಹಾಕಬಹುದಾ ಎಂಬ ಕುತೂಹಲ ಮೂಡಿಸಿದೆ. ಸಂಸದ ವೀರಪ್ಪ ಮೊಯ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ತಾವೇ ಅಭ್ಯರ್ಥಿ ಎಂದು ಹೇಳಿದ್ದಾರೆ. ಕಳೆದ ಬಾರಿ ಹೆಚ್.ಡಿ. ಕುಮಾರಸ್ವಾಮಿ ಅವರು ಈ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಈ ಹಿನ್ನೆಲೆಯಲ್ಲಿ ಮೊಯ್ಲಿ ಹೇಳಿಕೆಗೆ ಮಹತ್ವ ಬಂದಿದೆ. ಇನ್ನೂ ಇದೇ ವೇಳೆ ಕಾಂಗ್ರೆಸ್ 17 ಲೋಕಸಭಾ ಕ್ಷೇತ್ರಗನ್ನು ಜೆಡಿಎಸ್ ಗೆ ಬಿಟ್ಟಿಕೊಡಲಿದೆ ಎನ್ನಲಾಗಿದ್ದು, ಈ ಪೈಕಿ ಯಾವ ಕ್ಷೇತ್ರ ಅನ್ನೋದರ ಬಗ್ಗೆ ಉಭಯ ಪಕ್ಷಗಳ ವರಿಷ್ಠರು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
Comments