ಸಚಿವ ಸಂಪುಟ ವಿಸ್ತರಣೆ ಕುರಿತು ಅತೃಪ್ತ ಶಾಸಕರಿಗೆ ಬಿಗ್ ಶಾಕ್ ಕೊಟ್ಟ ‘ಕೈ’ ಹೈಕಮಾಂಡ್..!!

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನ ಅತೃಪ್ತ ಶಾಸಕರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬಿಗ್ ಶಾಕ್ ಕೊಟ್ಟಿದ್ದಾರೆ.
ಕಳೆದ ಜೂನ್ 6 ರ ಬಳಿಕ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಕಾಣಿಸಿಕೊಂಡ ಅಸಮಾಧಾನ ಮೈತ್ರಿ ಸರ್ಕಾರದ ಸ್ಥಿರತೆಗೆ ಭಂಗ ತರಬಹುದೆಂಬ ವಾತಾವರಣ ಸೃಷ್ಟಿಸಿತ್ತು. ಇದರಿಂದ ಎಚ್ಚೆತ್ತುಕೊಂಡ ಕಾಂಗ್ರೆಸ್ ಹೈಕಮಂಡ್ ಭಿನ್ನರ ಬಾಯಿಗೆ ಬೀಗ ಹಾಕುವಲ್ಲಿ ಯಶಸ್ವಿಯಾಗಿದೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲಾಗಿದೆ. ಆ ಮೂಲಕ ದೇಶಕ್ಕೊಂದು ಹೊಸ ಸಂದೇಶ ನೀಡುವ ಯತ್ನ ಮಾಡಲಾಗಿದೆ. ಪರಿಸ್ಥಿತಿಗೆ ಹೊಂದಿಕೊಂಡು ಹೋಗಬೇಕು. ಇಲ್ಲ ಎಂದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಿ, ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆತರೆ ಸಂಪೂರ್ಣ ಅಧಿಕಾರ ಸಿಗುತ್ತದೆ ಎಂದು ರಾಹುಲ್ ಗಾಂಧಿ ಅತೃಪ್ತರಿಗೆ ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಚುನಾವಣೆಗೆ ಹೋದರೆ ಇದ್ದ ಅಧಿಕಾರವನ್ನೂ ಕಳೆದುಕೊಂಡು ಬಿಜೆಪಿಗೆ ಅಧಿಕಾರ ಧಾರೆ ಎರೆಯಲು ನಾವು ಸಿದ್ಧರಿಲ್ಲ ಎಂದು ರಾಹುಲ್ ಗಾಂಧಿ ಅತೃಪ್ತ ನಾಯಕರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.
Comments