ಲೋಕಸಭಾ ಚುನಾವಣೆ ಹಿನ್ನಲೆ ಕಾಂಗ್ರೆಸ್ ಗೆ ಬಿಗ್ ಶಾಕ್ ಕೊಟ್ಟ ಜೆಡಿಎಸ್..!!

ಮುಂಬರುವ 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಸ್ ಮೈತ್ರಿಗೆ ರಾಜ್ಯ ಕಾಂಗ್ರೆಸ್ ನಲ್ಲಿ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾದ ಹಿನ್ನಲೆಯಲ್ಲಿ ಲೋಕಸಭೆ ಚುನಾವಣೆ ಗೆ ಸ್ವಂತ ಬಲದ ಮೇಲೆ ಜೆಡಿಎಸ್ ಸ್ಪರ್ಧೆ ಮಾಡಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸಾಧ್ಯವಾಗದಿದ್ದರೆ, ಸ್ವತಂತ್ರವಾಗಿ ಅಖಾಡಕ್ಕಿಳಿಯಲು ತಯಾರಿ ಮಾಡಿಕೊಳ್ಳುವಂತೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಪಕ್ಷದ ಮುಖಂಡರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಹಳೇ ಮೈಸೂರು ಭಾಗದಲ್ಲಿ ಪ್ರಬಲ ಎದುರಾಳಿ ಪಕ್ಷಗಳಾದ ಜೆಡಿಎಸ್-ಕಾಂಗ್ರೆಸ್ ಮಧ್ಯೆ ಹೊಂದಾಣಿಕೆ ಸಾಧ್ಯವಾಗದಿದ್ದರೆ, ಮೈತ್ರಿಯನ್ನು ರಾಜ್ಯ ಸರ್ಕಾರದ ಮಟ್ಟಕ್ಕೆ ಸೀಮಿತಗೊಳಿಸಿ, ಲೋಕಸಭೆ ಚುನಾವಣೆಯನ್ನು ಸ್ವತಂತ್ರವಾಗಿ ಎದುರಿಸುವ ಅನಿವಾರ್ಯತೆ ಜೆಡಿಎಸ್ ಹೊಂದಿದೆ ಎಂದು ಹೇಳಲಾಗಿದೆ. ಅವಧಿಪೂರ್ವ ಲೋಕಸಭೆ ಚುನಾವಣೆ ನಡೆಯುವ ನಿರೀಕ್ಷೆಯಿದ್ದು, ಕಾಂಗ್ರೆಸ್ ನೊಂದಿಗೆ ಸೀಟು ಹೊಂದಾಣಿಕೆ ಸಾಧ್ಯವಾಗದೇ ಹೋದರೆ ಎಲ್ಲ 28 ಲೋಕಸಭಾ ಕ್ಷೇತ್ರಗಳಲ್ಲೂ ಸ್ಪರ್ಧೆಗೆ ಸಿದ್ದತೆ ಇರಲಿ ಎಂದು ಎಚ್.ಡಿ.ದೇವೇಗೌಡರು ಸೂಚಿಸಿದ್ದಾರೆ ಎನ್ನಲಾಗಿದೆ.
Comments