ಸಿದ್ದು ಗೆ ಖಡಕ್ ಟಾಂಗ್ ಕೊಟ್ಟ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ..!!

ಕಳೆದ ಸರ್ಕಾರದ ಅವಧಿಯಲ್ಲಿ ಅರ್ಹರಲ್ಲದ ವ್ಯಕ್ತಿಗಳನ್ನು ಸಹ ಸಿಂಡಿಕೇಟ್ ಸದಸ್ಯರಾಗಿ ನೇಮಕ ಮಾಡಲಾಗಿತ್ತು ಎಂದು ಹೇಳುವ ಮೂಲಕ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಖಡಕ್ ಟಾಂಗ್ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಿ.ಟಿ.ದೇವೇಗೌಡ ಅವರು, ಯಾವುದೇ ಹೊಸ ಸರ್ಕಾರ ಬಂದರೂ ಹಿಂದಿನ ಸರ್ಕಾರದ ನೇಮಕವನ್ನು ರದ್ದು ಮಾಡುತ್ತದೆ. ಬಿಜೆಪಿ ಅವಧಿಯ ಸದಸ್ಯರು ನೇಮಕವಾಗಿದ್ದ ಕೆಲವೇ ತಿಂಗಳಲ್ಲೇ ಸಿದ್ದರಾಮಯ್ಯ ಅವರು ಅಧಿಕಾರ ವಹಿಸಿಕೊಂಡು ಬಿಜೆಪಿ ಅವಧಿಯ ನೇಮಕ ರದ್ದು ಮಾಡಿದ್ದರು. ಹೀಗಾಗಿ ಮೈತ್ರಿ ಸರ್ಕಾರದಲ್ಲೂ ಅದನ್ನು ಮಾಡಿದ್ದೇವೆ. ಸಿಂಡಿಕೇಟ್ ಹಾಗೂ ಸೆನೆಟ್ ಸದಸ್ಯರ ಹುದ್ದೆಗೆ ಅರ್ಹರನ್ನು ನೇಮಕ ಮಾಡಬೇಕು ಎಂಬುದು ನಮ್ಮ ಉದ್ದೇಶ ಎಂದು ಹೇಳಿದರು. ಈ ಮೂಲಕ ಸಿದ್ದರಾಮಯ್ಯ ಅವರ ವಿರೋಧದ ನಡುವೆಯೂ ಸಿಂಡಿಕೇಟ್ ಸದಸ್ಯರ ನೇಮಕ ರದ್ದುಗೊಳಿಸಿದ್ದ ತಮ್ಮ ನಿರ್ಧಾರವನ್ನು ಸಚಿವರು ಮತ್ತೊಮ್ಮೆ ಸಮರ್ಥಿಸಿಕೊಂಡಂತಾಗಿದೆ. ಹಾಗಾದರೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಅನರ್ಹರು ನೇಮಕವಾಗಿದ್ದರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಕೆಲವು ಅನರ್ಹರನ್ನು ಸಹ ನೇಮಕ ಮಾಡಲಾಗಿತ್ತು ಎಂದು ಹೇಳಿದರು.
Comments