ನಿರುದ್ಯೋಗಿಗಳಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಬಂಪರ್ ಗಿಫ್ಟ್ ..!!

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಪ್ರದೇಶದಲ್ಲಿ ಬರೋಬ್ಬರಿ 60 ಸಾವಿರ ಕೋಟಿ ರೂ. ವೆಚ್ಚದ 81 ಯೋಜನೆಗಳಿಗೆ ಭೂಮಿ ಪೂಜೆ ನೆರವೇರಿಸಿದ್ದಾರೆ.
ದೇಶದಲ್ಲೇ ಅತಿ ಹೆಚ್ಚು ಅಂದರೆ 80 ಕೋಟಿ ಕ್ಷೇತ್ರಗಳನ್ನು ಹೊಂದಿರುವ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸುವ ಉತ್ತರಪ್ರದೇಶದಲ್ಲಿ ಮೋದಿ ಅವರು ಬೃಹತ್ ಮೊತ್ತದ ಯೋಜನೆಗಳಿಗೆ ಚಾಲನೆ ನೀಡಿರುವುದು ಮಹತ್ವದ್ದಾಗಿದೆ. ಅಲ್ಲದೆ ಹಿಂದುಳಿದಿರುವ ಉತ್ತರಪ್ರದೇಶದಲ್ಲಿ ಕೈಗಾರಿಕೀಕರಣಕ್ಕೆ ಒತ್ತು ನೀಡಿದಂತಾಗಿದೆ. ಈ ಯೋಜನೆಗಳಿಂದ 2 ಲಕ್ಷ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ. ಭೂಮಿಪೂಜೆ ಕಾರ್ಯಕ್ರಮದಲ್ಲಿ ಆದಿತ್ಯ ಬಿರ್ಲಾ ಸಮೂಹದ ಕುಮಾರ ಮಂಗಳಂ ಬಿರ್ಲಾ, ಅದಾನಿ ಸಮೂಹದ ಗೌತಮ್ ಅದಾನಿ, ಎಸ್ಸೆಲ್ ಗ್ರೂಪ್‌ನ ಸುಭಾಷ್ ಚಂದ್ರ, ಐಟಿಸಿ ಕಂಪನಿ ವ್ಯವಸ್ಥಾಪಕ ನಿರ್ದೆಶಕ ಸಂಜೀವ್ ಪುರಿ ಸೇರಿದಂತೆ 80 ಖ್ಯಾತನಾಮ ಉದ್ಯಮಿಗಳು ಉಪಸ್ಥಿತರಿದ್ದರು. ಇದೆ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಇಂದಿನ ಕಾರ್ಯಕ್ರಮವನ್ನು ಗ್ರೌಂಡ್ ಬ್ರೇಕಿಂಗ್ (ಶಂಕುಸ್ಥಾಪನೆ) ಕಾರ್ಯಕ್ರಮ ಎಂದು ಕೆಲವರು ಕರೆಯುತ್ತಾರೆ. ಆದರೆ ಇದು ರೆಕಾರ್ಡ್ ಬ್ರೇಕಿಂಗ್ (ದಾಖಲೆಯ) ಕಾರ್ಯಕ್ರಮ. ನಾನೂ ದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿದ್ದೆ. 60 ಸಾವಿರ ಕೋಟಿ ರೂ. ಹೂಡಿಕೆ ಅತಿದೊಡ್ಡ ಸಾಧನೆ. ಹೀಗಾಗಿ ಅಧಿಕಾರಿಗಳಿಗೆ ಧನ್ಯವಾದ ಹೇಳುವೆ ಎಂದು ತಿಳಿಸಿದರು. ಫೆಬ್ರವರಿಯಲ್ಲಷ್ಟೇ ಉತ್ತರಪ್ರದೇಶದಲ್ಲಿ ಹೂಡಿಕೆದಾರರ ಸಮಾವೇಶ ನಡೆದಿತ್ತು.
Comments