ಬಿಗ್ ಬ್ರೇಕಿಂಗ್ : 20 ಮಂದಿ ಬಿಜೆಪಿ ಶಾಸಕರು ಕಾಂಗ್ರೆಸ್ ಗೆ..! ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ..!!

20 ಮಂದಿ ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ ಅಂತ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.
ಬೀದರ್ ನಲ್ಲಿ ನಡೆದ ಅಭಿನಂದನ ಸಮಾರಂಭ ಮುಗಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 20 ಮಂದಿ ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ, ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದರ ಬಗ್ಗೆ ಪರಿಶೀಲನೆ ಮಾಡಲಾಗುವುದು ಅಂತ ಹೇಳಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಯಾವಬ್ಬ ಶಾಸಕರು ಕೂಡ ಬಿಜೆಪಿ ಗೆ ಹೋಗಲು ಸಾಧ್ಯವಿಲ್ಲ, ಕಾಂಗ್ರೆಸ್ ಪಕ್ಷ ತಳ ಮಟ್ಟದಿಂದ ಬಲಿಷ್ಟವಾದ ಪಕ್ಷವಾಗಿದೆ ಎಂದು ಹೇಳಿದರು.
Comments