ಮೈತ್ರಿ ಸರ್ಕಾರದ ವಿರುದ್ದ ಅಚ್ಚರಿ ಭವಿಷ್ಯ ನುಡಿದ ಬಿಎಸ್’ವೈ..!

ರಾಜ್ಯ ವಿಧಾನ ಸಭಾ ಚುನಾವಣೆ ನಡೆದು ಫಲಿತಾಂಶ ಹೊರಬಂದ ಮೇಲೆ ಸಮ್ಮಿಶ್ರ ಸರ್ಕಾರ ರಚನೆಯಾಗಿದ್ದು ಎಲ್ಲರಿಗೂ ಕೂಡ ತಿಳಿದೆ ಇದೆ. ಆದರೆ ಈ ಸರ್ಕಾರ ಏನಾಗುತ್ತದೆ ಎಂಬುದನ್ನು ಇನ್ನು 15 ದಿನಗಳ ಕಾಲ ಕಾದು ನೋಡಿ ಎಂದು ಬಿಜೆಪಿಯ ರಾಜ್ಯಾಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ ಹೇಳುವ ಮೂಲಕ ಕುತೂಹಲವನ್ನು ಕೆರಳಿಸಿದ್ದಾರೆ.
ಮಂಗಳವಾರ ಬೆಳಗಾವಿಯಲ್ಲಿ ಮಾಧ್ಯಮದವರೊದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಹೋರಾಟದ ಬಿಸಿಗೆ ಈಗಾಗಲೇ ಬೇಸತ್ತಿರುವ ಎಚ್ .ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರದ ಆಯಸ್ಸು ಹೆಚ್ಚು ದಿನ ಇರುವುದಿಲ್ಲ ಎಂದು ಭವಿಷ್ಯವನ್ನು ನುಡಿದಿದ್ದಾರೆ..ಸಿಎಂ ಕುಮಾರಸ್ವಾಮಿ ಅವರು ರಾಜ್ಯದ ಜನತೆ ಹಾಗೂ ಶಾಸಕರಷ್ಟೇ ಅಲ್ಲ ಸಮ್ಮಿಶ್ರ ಸರ್ಕಾರದ ಪಾಲುದಾರರಾಗಿರುವ ಕಾಂಗ್ರೆಸ್‌ನವರೂ ಕೂಡ ಅವರ ಬಗ್ಗೆ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದೂ ಯಡಿಯೂರಪ್ಪ ಈ ಮೂಲಕ ತಿಳಿಸಿದರು.
Comments