ಲೋಕಸಭಾ ಚುನಾವಣೆ : ಭಾರೀ ಕುತೂಹಲ ಕೆರಳಿಸಿದ ಅಂಬಿ ಸ್ಪರ್ಧೆಗೆ ತೆರೆ..! ಯಾವ ಪಕ್ಷ ,ಯಾವ ಕ್ಷೇತ್ರ..!?

ಮುಂಬರುವ 2019 ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದೆ. ಈ ಬಗ್ಗೆ ಕೆಪಿಸಿಸಿ ಕಛೇರಿಯಲ್ಲಿ ಸರಣಿ ಸಭೆ ನಡೆದಿದ್ದು, ಈ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡ ಕೆಲ ಪ್ರಮುಖ ನಾಯಕರನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದ್ದು, ಜೊತೆಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದೇ ಪಕ್ಷದ ನಾಯಕರ ವಿರುದ್ಧ ಮುನಿಸಿಕೊಂಡಿರುವ ರೆಬೆಲ್ ಸ್ಟಾರ್ ಅಂಬರೀಶ್ ಅವರ ಮನವೊಲಿಸಲು ನಿರ್ಧರಿಸಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಅಂಬರೀಶ್ ತಟಸ್ಥ ನಿಲುವು ತಾಳಿದ ಕಾರಣ ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಸೋಲನ್ನಪ್ಪಲು ಕಾರಣವಾಯಿತೆಂಬುದನ್ನು ಮನಗಂಡಿರುವ ಕೆಪಿಸಿಸಿ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಅಂಬರೀಶ್ ಅವರ ಮನವೊಲಿಸುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೂಚಿಸಿದ್ದಾರೆಂದು ಹೇಳಲಾಗಿದೆ. ಜೊತೆಗೆ ಲೋಕಸಭಾ ಚುನಾವಣೆಯಲ್ಲಿ ಮೈಸೂರಿನಿಂದ ಅಂಬರೀಶ್ ಕಣಕ್ಕಿಳಿದರೆ ಜೆಡಿಎಸ್ ಸಹ ಬೆಂಬಲ ಸೂಚಿಸಲಿದೆ. ಹೀಗಾಗಿ ಅವರನ್ನು ಕಣಕ್ಕಿಳಿಯುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಸಿದ್ದರಾಮಯ್ಯನವರಿಗೆ ನೀಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
Comments