ರಾಜ್ಯದಲ್ಲಿ ಮೂವರು ಸಿಎಂ ಎಂಬ ಬಿಜೆಪಿ ಟ್ವೀಟ್ ಗೆ ಖಡಕ್ ತಿರುಗೇಟು ಕೊಟ್ಟ ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಮೂವರು ಸಿಎಂ ಎಂಬ ಬಿಜೆಪಿ ಟ್ವೀಟ್ ಗೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತಿರುಗೇಟು ನೀಡಿದ್ದು, ಬಿಜೆಪಿ ನಾಯಕರಿಗೆ ಸಮ್ಮಿಶ್ರ ಸರ್ಕಾರದ ಕೆಲಸಗಳನ್ನು ಸಹಿಸಿಕೊಳ್ಳುವುದಕ್ಕೆ ಆಗುತ್ತಿಲ್ಲ, ಹಾಗಾಗಿ ಏನೇನೋ ಮಾತಾನಾಡುತ್ತಿದ್ದಾರೆ ಎಂದು ಹೇಳಿದರು.
ಬಿಜೆಪಿ ಕಾಲದಲ್ಲಿ ಏನೇನಾಗಿದೆ ಎಂದು ಗೊತ್ತಿದೆ. ಈಗ ಅವರು ನಮ್ಮ ವಿರುದ್ಧ ಮಾತನಾಡುತ್ತಿದ್ದಾರೆ ಅಷ್ಟೇ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು. ಇನ್ನೂ ರಾಜ್ಯದಲ್ಲಿ ಸಾರಿಗೆ ಬಂದ್ ಪರಿಣಾಮ ಬೀರಿಲ್ಲ. ಮೋಟಾರು ವಾಹನ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಇಂದು ರಾಷ್ಟ್ರಾವ್ಯಾಪ್ತಿ ಸಾರಿಗೆ ಮುಷ್ಕರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಸಾರಿಗೆ ನೌಕರರಿಗೆ ಕೆಲವು ಸಮಸ್ಯೆ ಆಗಿರುವುದರಿಂದ ಬಂದ್ ಮಾಡಿದ್ದಾರೆ. ನಮ್ಮ ರಾಜ್ಯದಲ್ಲಿ ಇದರ ಪ್ರಭಾವ ಹೆಚ್ಚಾಗಿಲ್ಲ ಎಂದರು.
Comments