ಬಿಗ್ ಬ್ರೇಕಿಂಗ್ : ಬಿ.ಎಸ್.ವೈ ಗೆ ಹೆದರಿ ಲೋಕಸಭಾ ಚುನಾವಣೆಯ ಕಣದಿಂದ ಹಿಂದೆ ಸರಿದ ಜೆಡಿಎಸ್ ನ ಈ ನಾಯಕ..!

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಶಿವಮೊಗ್ಗದಲ್ಲಿ ಸೋಲಿಸಲು ಅಸಾಧ್ಯವೆಂದು ಮಧು ಬಂಗಾರಪ್ಪ ಅವರು ಲೋಕಸಭಾ ಚುನಾವಣೆಯ ಕಣದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.
ಬಿ.ಎಸ್.ವೈ ಅವರು ಜಿಲ್ಲೆಯಲ್ಲಿ ಪ್ರಬಲ ನಾಯಕರಾಗಿರುವ ಹಿನ್ನೆಲೆಯಲ್ಲಿ ಅವರನ್ನು ಎದುರಿಸಿ ಗೆಲ್ಲುವುದು ಕಷ್ಟಸಾಧ್ಯವೆಂದು ಮಧು ಬಂಗಾರಪ್ಪ ಅವರು ಲೋಕಸಭೆ ಚುನಾವಣೆಯ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದ್ದು, ಜೆಡಿಎಸ್ ಗೆ ಪ್ರಾರಂಭದಲ್ಲೇ ಶಾಕ್ ಆಗಿದೆ. ಲೋಕಸಭೆ ಚುನಾವಣೆಗೆ ಬಿ.ಎಸ್.ವೈ ವಿರುದ್ಧ ಪ್ರಬಲ ಪ್ರತಿಸ್ಪರ್ಧಿಯಾಗಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಮಧು ಬಂಗಾರಪ್ಪ ಅವರನ್ನು ಅಖಾಡಕ್ಕಿಳಿಸಲು ಮುಂದಾಗಿದ್ದರು. ಆದರೆ ಪ್ರಾರಂಭದಲ್ಲೇ ಜೆಡಿಎಸ್ ಗೆ ವಿಘ್ನ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ಬಾರಿ ಸ್ಪರ್ಧಿಸಿ ಸೋತಿದ್ದ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರಿಗೆ ಆಫರ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
Comments