ವಿಕಲಚೇತನರಿಗೆ ಸಿಹಿ ಸುದ್ದಿ ನೀಡಿದ ಸಿಎಂ ಕುಮಾರಸ್ವಾಮಿ
ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ದಿನ ಒಂದು ಗಂಟೆ ಜನತಾದರ್ಶನ ಮಾಡುವುದಾಗಿ ತಿಳಿಸಿದ್ದರು. ಈ ಮೂಲಕ ವಿಕಲಚೇತನರಿಗೆ ಉದ್ಯೋಗ ಕಲ್ಪಿಸಿ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ಇದೀಗ ಆ ಕಾರ್ಯಕ್ಕೆ ಕುಮಾರಸ್ವಾಮಿಯವರು ಮುಂದಾಗಿದ್ದಾರೆ.
ಯಾವುದೇ ಪದವಿ, ಸ್ನಾತಕೋತ್ತರ ಪದವಿಗಳನ್ನು ಪಡೆದಿರುವ ವಿಕಲಚೇತನರಿಗೆ ಆಯಾ ಜಿಲ್ಲೆಗಳಲ್ಲಿ ಇರುವಂತಹ ಕೈಗಾರಿಕೆಗಳಲ್ಲಿ ಕೆಲಸ ಕೊಡಿಸಲು ನಿರ್ಧರಿಸಲಾಗಿದೆ. ಜಿಲ್ಲಾಧಿಕಾರಿಗಳಿಗೆ ಮತ್ತು ಜಿಲ್ಲಾ ಪಂಚಾಯತ್’ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಭೆ ನಡೆಸಲು ಸೂಚಿಸಲಾಗಿದೆ ಎಂದು ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
Comments