ಮೈಸೂರು ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಫಿಕ್ಸ್..!?

ಈಗಾಗಲೇ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳನ್ನು ಕೂಡ ಎಲ್ಲಾ ಪಕ್ಷದವರು ಮಾಡಿಕೊಳ್ಳುತ್ತಿದ್ದಾರೆ. ಮುಂದೆ ಬರುವ 2019ರ ಲೋಕಸಭಾ ಚುನಾವಣೆಗೆ ಮೈಸೂರಿನ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಹೇಳಲಾಗುತ್ತಿದೆ.
ಇದರ ಮುಂದುವರೆದ ಭಾಗವಾಗಿ ಬಿಜೆಪಿಗೆ ಯದುವೀರ್ ಅವರನ್ನು ಕರೆತರಲು ಆರ್‍ಎಸ್‍ಎಸ್ ಕೂಡ ಸಾಥ್ ನೀಡಲು ಮುಂದಾಗಿದೆ. ಮೂರು ದಿನಗಳ ಕಾಲ ರಾಜ್ಯ ಪ್ರವಾಸದಲ್ಲಿರುವ ಆರ್‍ಎಸ್‍ಎಸ್‍ನ ಸಂಚಾಲಕ ಮೋಹನ್ ಭಾಗವತ್ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಆರ್‍ಎಸ್‍ಎಸ್ ಮುಖಂಡರು, ಯದುವೀರ್‍ರನ್ನು ಬಿಜೆಪಿ ಕರೆತರಲು ತಂತ್ರ ರೂಪಿಸಿದ್ದಾರೆ ಎಂದು ಹೇಳಲಾಗುತ್ತಿದೆ, ಇತ್ತ ಮೈಸೂರಿನ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಬಿಜೆಪಿಗೆ ಕರೆತಂದು, 2019ರ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅಖಾಡಕ್ಕಿಳಿಸುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.
Comments