ಮೈತ್ರಿ ಸರ್ಕಾರದ ಬಗ್ಗೆ ಸ್ಫೋಟಕ ಮಾಹಿತಿ ಕೊಟ್ಟ ಹೆಚ್.ಡಿ.ಡಿ
ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿಯವರು ಲೋಕಸಭೆ ಚುನಾವಣೆಗೆ ಮೊದಲೇ ಸರ್ಕಾರವನ್ನು ಅಳಿಸಿ ಹಾಕಲು ಪ್ರಯತ್ನಿಸುತ್ತಿದ್ದಾರೆ.
ಆದರೆ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಹಾಗೇಯೇ ಲೋಕಸಭೆ ಚುನಾವಣೆಯ ನಂತರವು ಸರ್ಕಾರ ಸ್ಥಿರವಾಗಿರುತ್ತದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತಿಳಿಸಿದ್ದಾರೆ. ಹೊಳೆನರಸೀಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ದೇವೆಗೌಡರು, ಬಿಜೆಪಿಯವರಿಗೆ ಕುಮಾರಸ್ವಾಮಿಯೇ ಟಾರ್ಗೆಟ್ ಆಗಿದ್ದಾರೆ, ಮುಂಬರುವ ದಿನಗಳಲ್ಲಿ ಕುಮಾರಸ್ವಾಮಿ ರಾಷ್ಟ್ರರಾಜಕಾರಣಕ್ಕೆ ಹೋಗಲಿದ್ದಾರೆ ಎಂದು ಹೇಳಿದರು.
Comments