ಸರ್ಕಾರದಿಂದ ಅಟಲ್ ಬಿಹಾರಿ ವಾಜಪೇಯಿಯವರ ಸ್ಮಾರಕ ನಿರ್ಮಾಣ
ಅಟಲ್ ಬಿಹಾರಿ ವಾಜುಪೇಯಿ.. ದೇಶ ಕಂಡ ಅತ್ಯದ್ಭುತ ರಾಜಕಾರಣಿಗಳಲ್ಲಿ ಇವರು ಕೂಡ ಒಬ್ಬರು. ಇವರು ಕಳೆದ ಎರಡು ತಿಂಗಳಿನಿಂದಲೂ ಕೂಡ ವಯೋ ಸಹಜ ಅನಾರೋಗ್ಯದಿಂದ ಹಾಗೂ ಬಹು ಅಂಗಾಂಗ ವೈಫಲ್ಯದಿಂದ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತಹ ಮಾಜಿ ಪ್ರಧಾನಿಯಾದ ಅಟಲ್ ಬಿಹಾರಿ ವಾಜಪೇಯಿ ಚಿಕಿತ್ಸೆ ಫಲಕಾರಿಯಾಗದೇ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿನ್ನೆ ಸುಮಾರು ಸಂಜೆ 5.05 ನಿಮಿಷಕ್ಕೆ ವಿಧಿವಶರಾಗಿದ್ದಾರೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಗೌರವಾರ್ಥವಾಗಿ ಅವರ ಸ್ಮಾರಕವನ್ನು ನಿರ್ಮಿಸಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಹಾಲಿ ಮತ್ತು ಮಾಜಿ ರಾಷ್ಟ್ರಪತಿಗಳು, ಉಪರಾಷ್ಟ್ರಪತಿಗಳು, ಪ್ರಧಾನಿ ಮತ್ತು ಇತರ ರಾಷ್ಟ್ರನಾಯಕರ ಅಂತ್ಯಸಂಸ್ಕಾರಕ್ಕೆ ಮೀಸಲಿರಿಸಲಾದ ಸ್ಮೃತಿ ಸ್ಥಳದಲ್ಲಿಯೇ ಮಾಜಿ ಪ್ರಧಾನಿಯವರ ಅಂತ್ಯ ಸಂಸ್ಕಾರವನ್ನು ನಡೆಸಿದರೂ, ದೇಶಕ್ಕೆ ವಾಜಪೇಯಿಯವರು ನೀಡಿದ ಅಪಾರ ಕೊಡುಗೆಯನ್ನು ಪರಿಗಣಿಸಿ, ವಾಜಪೇಯಿ ಸ್ಮಾರಕವನ್ನು ಪ್ರತ್ಯೇಕವಾಗಿ ನಿರ್ಮಿಸಲು ಮೋದಿ ಸರ್ಕಾರ ನಿರ್ಧಾರ ಮಾಡಿದೆ ಎಂದು ಕೇಂದ್ರ ಸಚಿವರೊಬ್ಬರು ಬಹಿರಂಗವಾಗಿ ತಿಳಿಸಿದ್ದಾರೆ.
Comments