ಮುಖ್ಯಮಂತ್ರಿ ಕುಮಾರಣ್ಣ ಮಾಡಿರುವ ಈ ಕೆಲಸ ನಿಜಕ್ಕೂ ಮೆಚ್ಚುವಂತದ್ದು..! ಆ ಕೆಲಸ ಏನ್ ಗೊತ್ತಾ..?

17 Aug 2018 10:19 AM | Politics
13666 Report

ಇತ್ತಿಚಿಗೆ ಎಲ್ಲ ಕಡೆಗಳಲ್ಲೂ ಕೂಡ ಅತೀವೃಷ್ಟಿ ಉಂಟಾಗಿದೆ. ಕೊಡಗು ಸೇರಿದಂತೆ ಅತಿವೃಷ್ಟಿ ಬಾಧಿತ ಆರು ಜಿಲ್ಲೆಗಳಿಗೆ ಪರಿಹಾರ ಕಾರ್ಯಗಳಿಗಾಗಿ 200 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಆದೇಶವನ್ನು ಹೊರಡಿಸಿದ್ದಾರೆ.

ಹೆಚ್ಚು ಮಳೆಯಿಂದಾಗಿ ಪ್ರವಾಹ, ಭೂಕುಸಿತ ಮತ್ತಿತರ ಅನಾಹುತ ಸಂಭವಿಸಿರುವ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವಸ್ತುಸ್ಥಿತಿ ಕುರಿತಂತೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಸಭೆಯನ್ನು ನಡೆಸಲಾಯಿತು. ಸಭೆಯು ಮುಗಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರು, ಮಳೆ ಹಾಗೂ ನೆರೆ ಹಾವಳಿಯಿಂದ ಆರು ಜಿಲ್ಲೆಗಳಲ್ಲಿ ವ್ಯಾಪಕ ಹಾನಿಯು ಸಂಭವಿಸಿದೆ. ಹಾಗೇಯೆ  ಜನಜೀವನ ಕೂಡ ಅಸ್ತವ್ಯಸ್ಥಗೊಂಡಿದೆ. ಪರಿಹಾರ ಕಾರ್ಯಗಳಿಗಾಗಿ 200 ಕೋಟಿ ರೂ.ಅನುದಾನ ಕೂಡಲೇ ಬಿಡುಗಡೆ ಮಾಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದರು.

Edited By

Manjula M

Reported By

Manjula M

Comments