ವಾಜಪೇಯಿಯವರಿಗೆ ಅಂತಿಮ ನಮನ ಸಲ್ಲಿಸಿದ ರಾಜ್ಯ ಬಿಜೆಪಿ ನಾಯಕರು

ನಿನ್ನೆ ಸಂಜೆ ಸುಮಾರು 5.05 ಕ್ಕೆ ನಿಧನರಾದ ಮಾಜಿ ಪ್ರಧಾನಿ, ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಅಟಲ್ ಬಿಹಾರಿ ವಾಜಪೇಯಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬಿಜೆಪಿಯ ರಾಜ್ಯ ನಾಯಕರು ನವದೆಹಲಿಗೆ ಹೋಗಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್‍ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತ್‍ಕುಮಾರ್, ಡಿ.ವಿ ಸದಾನಂದಾಗೌಡ, ರಮೇಶ್ ಜಿಗಜಿಣಗಿ, ಅನಂತ್‍ಕುಮಾರ್ ಹೆಗ್ಡೆ, ಹಿರಿಯ ಮುಖಂಡರಾದ ಡಿ.ಹೆಚ್,ಶಂಕರಮೂರ್ತಿ, ರಾಮಚಂದ್ರೇಗೌಡ, ಲೋಕಸಭಾ ಸದಸ್ಯರಾದ ಪಿ,ಸಿ ಮೋಹನ್, ಶೋಭಾ ಕರಂದ್ಲಾಜೆ, ಸುರೇಶ್ ಅಂಗಡಿ, ಪ್ರಹ್ಲಾದ್ ಜೋಶಿ, ಕರಡಿ ಸಂಗಣ್ಣ, ಪಿ.ಸಿ.ಗದ್ದೀಗೌಡರ್ ಸೇರಿದಂತೆ ಮತ್ತಿತರ ಪದಾಧಿಕಾರಿಗಳು ಹೋಗಿದ್ದಾರೆ. ಅನೇಕ ಗಣ್ಯರು ಕಂಬನಿಯನ್ನು ಮಿಡಿದಿದ್ದಾರೆ.
Comments