ತಿರುಗಿ ಬಿದ್ದಿದ್ದ ಪಾಟೀಲರಿಗೆ ಕಾಂಗ್ರೆಸ್’ನಿಂದ ಸಿಕ್ಕಿದೆ ಬಂಪರ್ ಗಿಫ್ಟ್..!
ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಚುನಾವಣೆಗೆ ಈಗಾಗಲೇ ಸಕಲ ಸಿದ್ದತೆಗಳು ನಡೆಯುತ್ತಿವೆ. ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಗೆ ಮಾಜಿ ಸಚಿವರಾದ ಎಂ.ಬಿ. ಪಾಟೀಲ್ ಅವರ ಸಹೋದರನಾದ ಸುನೀಲ್‌ಗೌಡ ಬಸನಗೌಡ ಪಾಟೀಲ್ ಅವರನ್ನು ಅಖಾಡಕ್ಕಿಳಿಸಲು ಕಾಂಗ್ರೆಸ್ ಪಕ್ಷ ನಿರ್ಧಾರ ಮಾಡಿದೆ.
ಗುರುವಾರ ನಡೆದಂತಹ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಘಟಕದ ಮುಖಂಡರ ಸಭೆಯ ನಂತರ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಈ ತಿರ್ಮಾನಕ್ಕೆ ಬಂದಿದ್ದಾರೆ. ಪ್ರಸ್ತುತ ವಿಜಯಪುರದ ಬಿಎಲ್‌ಡಿ ಕಾಲೇಜಿನ ಉಸ್ತುವಾರಿ ನೋಡಿಕೊಳ್ಳುತ್ತಿರುವ ಸುನೀಲ್‌ಗೌಡ ಪಾಟೀಲ್ ಅವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಥಳೀಯ ಸಂಸ್ಥೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಗೆ ಆಯ್ಕೆ ಮಾಡಿರುವುದು ಕಾಂಗ್ರೆಸ್ ವಲಯದಲ್ಲಿ ಹುಬ್ಬೇರಿಸಿದಂತಾಗಿದೆ.
Comments