ಬೆಂಗಳೂರು ಬಿಜೆಪಿ ಶಾಸಕರ ಈ ಕೆಲಸ ನಿಜಕ್ಕೂ ಮೆಚ್ಚುವಂತದ್ದು..!

ಅತೀವೃಷ್ಟಿಯಿಂದಾಗಿ ಕೊಡಗು ಮತ್ತು ಮತ್ತಿತ್ತರ ಜಿಲ್ಲೆಗಳು ಸಂಕಷ್ಟದಲ್ಲಿ ಸಿಲುಕಿವೆ. ಕೊಡಗು ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ಜನರ ನೆರವಿಗಾಗಿ ಬೆಂಗಳೂರು ನಗರದ ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಪಾಲಿಕೆ ಸದಸ್ಯರ ಎರಡು ತಿಂಗಳ ವೇತನ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೊಡಲು ನಿರ್ಧಾರ ಮಾಡಿದ್ದಾರೆ.
ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬೆಂಗಳೂರು ನಗರ ಶಾಸಕರು ಹಾಗೂ ಪಾಲಿಕೆ ಸದಸ್ಯರ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಪಕ್ಷದ ಹಿರಿಯ ಮುಖಂಡರಾದ ಆರ್.ಅಶೋಕ್ ಈ ವಿಷಯವನ್ನು ತಿಳಿಸಿದರು. ಶಾಸಕರು ಮತ್ತು ಜನ ಪ್ರತಿನಿಧಿಗಳ ನೇತೃತ್ವದಲ್ಲಿ ನಡೆದಂತಹ ಸಭೆಯಲ್ಲಿ 11.05 ಲಕ್ಷ ಹಣ ಸಂಗ್ರಹವಾಗಿದೆ. ಮುಂದಿನ ಮೂರು ನಾಲ್ಕು ದಿನಗಳಲ್ಲಿ ಎಲ್ಲಾ ವಸ್ತುಗಳನ್ನು ಸಂತ್ರಸ್ತರಿಗೆ ತಲುಪಿಸುವ ಕೆಲಸವನ್ನು ಮಾಡಲಾಗುವುದು. ಹಾಗೂ ಸಹಾಯ ಮಾಡುವವರು ಹಣ ಮತ್ತು ಸೇವಾಭಾರತಿ ಹೆಸರಿನಲ್ಲಿ ಚೆಕ್‌ಗಳನ್ನು ನೀಡಬಹುದು. ಈ ವಸ್ತುಗಳನ್ನು ಖುದ್ದು ನಾನೇ ಅಲ್ಲಿಗೆ ಹೋಗಿ ಸಂತ್ರಸ್ತರಿಗೆ ತಲುಪಿಸುತ್ತೇನೆ ಎಂದು ಆರ್ ಅಶೋಕ್ ತಿಳಿಸಿದ್ದಾರೆ.
Comments