ಮತ್ತೆ ಭೂ ವಿವಾದದಲ್ಲಿ ಸಿಕ್ಕಿ ಹಾಕಿಕೊಂಡ ಬಿಎಸ್ ಯಡಿಯೂರಪ್ಪ..!?
2012ರಲ್ಲಿ ಬಿಡಿಎ ಶಿವರಾಮ ಕಾರಂತರ ಬಡಾವಣೆಯಲ್ಲಿ ಅಕ್ರಮವಾಗಿ ನೂರಾರು ಎಕರೆ ಕೈಬಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿಯಾದ ಬಿ.ಎಸ್.ವೈಗೆ ಸುಪ್ರೀಂಕೋರ್ಟ್ ನಲ್ಲಿ ಕಪಾಳಮೋಕ್ಷ ಮಾಡಿದೆ ಎಂದು ಕಾಂಗ್ರೆಸ್ ಮುಖಂಡರಾದ ವಿ.ಎಸ್.ಉಗ್ರಪ್ಪ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಸಂದರ್ಭದಲ್ಲಿ 251 ಮತ್ತು 498 ಎಕರೆ ಶಿವರಾಮ ಕಾರಂತ ಬಡಾವಣೆಯಲ್ಲಿ ಕೈಬಿಟ್ಟಿದ್ದ ಯಡಿಯೂರಪ್ಪ ಅವಧಿಯ ಸರಕಾರ ಭೂಸ್ವಾಧೀನಕ್ಕಾಗಿ ಪ್ರಾಥಮಿಕ ಅಧಿಸೂಚನೆ ಹೊರಡಿಸಿದ ಬಳಿಕ ಜಮೀನನ್ನು ಕೈಬಿಡಲಾಗಿತ್ತು ಬಡಾವಣೆಗೆ ಭೂಸ್ವಾಧೀನದ ಬಳಿಕ ಜಮೀನು ಕೈಬಿಡಲಾಗಿತ್ತು ಇದು ಕಾನೂನು ಬಾಹಿರ ಎಂದು ಸುಪ್ರೀಕೋರ್ಟ್ ತೀರ್ಪು ಕೊಟ್ಟಿದೆ ಎಂದು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಮಾತನಾಡುತ್ತ ಪ್ರಕರಣದ ತನಿಖೆಗಾಗಿ ಸುಪ್ರೀಂಕೋರ್ಟ್ ನ್ಯಾ.ಕೆ.ಎನ್.ಕೇಶವ ನಾರಾಯಣ ನೇತೃತ್ವದಲ್ಲಿ ಸಮಿತಿ ರಚಿಸಿದೆ ಎಂದು ತಿಳಿಸಿದರು.
Comments