ಲೋಕಸಭೆ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ..!?

ಸದ್ಯಕ್ಕೆ ಚಿತ್ರ ರಂಗದಲ್ಲಿ ಬ್ಯುಸಿಯಾಗಿರುವ ನಿಖಿಲ್ ಕುಮಾರಸ್ವಾಮಿಯವರು ಕೊನೆಗೆ ಬರುವುದು ರಾಜಕೀಯ ರಂಗಕ್ಕೆ ಎಂಬುದು ಎಲ್ಲರಿಗೂ ಗೊತ್ತೆ ಇದೆ. ಮುಂಬರುವ ಲೋಕಸಭೆ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿಯವರು ಸ್ಪರ್ಧಿಸುವ ಬಗ್ಗೆ ಈಗಾಗಲೇ ಸಾಕಷ್ಟು ಗೊಂದಲಗಳು ತಲೆ ಇತ್ತಿವೆ.
ನಿಖಿಲ್ ಕುಮಾರಸ್ವಾಮಿಯವರಿಗೆ ತಂದೆ ಮತ್ತು ತಾತನ ರೀತಿ ರಾಜಕೀಯದ ಬಗ್ಗೆ ಆಸಕ್ತಿ ಇರುವುದನ್ನು ಹಲವು ಬಾರಿ ಹೇಳಿಕೊಂಡಿದ್ದಾರೆ. ನಿಖಿಲ್ ತನ್ನ ತಂದೆು ಜೊತೆ ರಾಜಕೀಯದ ಹಾಗೂ ಹೋಗುಗಳ ಬಗ್ಗೆ ಚರ್ಚಿಸುತ್ತಿರುತ್ತಾರೆ. ಆದರೆ ಈ ಬಗ್ಗೆಯೇ ಸಾಕಷ್ಟು ವಿಷಯಗಳು ಹರಿದಾಡುತ್ತಿವೆ. ನಿಖಿಲ್ ಕುಮಾರಸ್ವಾಮಿ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ತಂದೆಯಂತೆ ರಾಜಕೀಯ ಪ್ರವೇಶ ಮಾಡುವುದಾಗಿ ಅವರು ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
Comments