ಉಪ ಮುಖ್ಯಮಂತ್ರಿಯಾದ ಜಿ. ಪರಮೇಶ್ವರ್ ಗೆ ಒಲಿಯಿತು ಮತ್ತೊಂದು ಹುದ್ದೆ..!
ಬಿಡಿಎ ಅಧ್ಯಕ್ಷರಾಗಲು ಕಾಂಗ್ರೆಸ್ ಮತ್ತು ಜೆಡಿಎಸ್‌ನ ಸುಮಾರು ಶಾಸಕರು ತೀವ್ರ ಲಾಬಿ ನಡೆಸುತ್ತಿದ್ದರು. ಇದರ ಬೆನ್ನಲ್ಲೇ ಉಪ ಮುಖ್ಯಮಂತ್ರಿಯಾದ ಡಾ. ಜಿ.ಪರಮೇಶ್ವರ್ ಅವರು ಬಿಡಿಎ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಉಪ ಮುಖ್ಯಮಂತ್ರಿಯಾದ ಡಾ. ಜಿ.ಪರಮೇಶ್ವರ್ ಅವರು ಬಿಡಿಎ ಅಧ್ಯಕ್ಷರಾಗಿ ಮಂಗಳವಾರ ಅಧಿಕಾರ ವಹಿಸಿಕೊಂಡರು. ನಂತರ ಅವರು ಸಭೆಯನ್ನೂ ನಡೆಸಿದರು. ಸಭೆಯಲ್ಲಿ ಅಧ್ಯಕ್ಷರು ಇಲ್ಲ ಎನ್ನುವ ಕಾರಣಕ್ಕೆ ಕೆಲಸಗಳು ಯಾವುದೇ ಕಾರಣಕ್ಕೂ ವಿಳಂಬವಾಗಬಾರದು. ಬಿಡಿಎ ಜನರ ವಿಶ್ವಾಸವನ್ನು ಉಳಿಸಿಕೊಳ್ಳಬೇಕಿದೆ. ಜತೆಗೆ ಹಲವು ಕಾಮಗಾರಿಗಳು ಪ್ರಗತಿ ಹಂತದಲ್ಲಿದೆ ಅವುಗಳು ಕೂಡ ವಿಳಂಬವಾಗಬಾರದು. ಕೆಲವು ಪ್ರಮುಖ ನಿರ್ಧಾರ ಕೈಗೊಳ್ಳಬೇಕಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವನಾದ ನಾನೇ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡಿದ್ದೇನೆ ಎಂದು ತಿಳಿಸಿದರು ಎಂದು ಹೇಳಲಾಗುತ್ತಿದೆ.
Comments