ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ..! ಈಗಂತ ಹೇಳಿದ್ದು ಯಾರು..?

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್'ಗೆ ಗೆಲುವು ಖಚಿತ. ರಾಜ್ಯದಲ್ಲಿ ಈಗ ಕಾಂಗ್ರೆಸ್ ಅಲೆ ಶುರುವಾಗಿದೆ ಎಂದು ಉಡುಪಿ ಉಸ್ತುವಾರಿ ಸಚಿವೆ ಜಯಮಾಲಾ ತಿಳಿಸಿದ್ದಾರೆ.
ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ಡೋರ್ ಟು ಡೋರ್ ಕ್ಯಾಂಪೇನ್ ಶುರು ಮಾಡಿರುವ ಜಯಮಾಲಾ ಉಡುಪಿಯ ನಗರಸಭೆ ವಾರ್ಡ್ ಗಳಿಗೆ ಭೇಟಿ ನೀಡಿ ಮತಯಾಚನೆ ಮಾಡುತ್ತಿದ್ದಾರೆ. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸ್ಟಾರ್ ಕ್ಯಾಂಪೇನರ್ ಅಲ್ಲ, ಕಾಂಗ್ರೆಸ್ ನ ಅಭಿವೃದ್ಧಿ ಕಾರ್ಯಗಳೇ ಚುನಾವಣೆಯ ಸ್ಟಾರ್ ಕ್ಯಾಂಪೇನರ್.ಸ್ಥಳೀಯಾಡಳಿತ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತೆ. ಹಿಂದಿನ ಸರ್ಕಾರದ ಯೋಜನೆಗಳನ್ನು ಈಗಿನ ಸಮ್ಮಿಶ್ರ ಸರ್ಕಾರ ಕೆಲಸಗಳನ್ನು ಕಂಡು ಜನ ಕಾಂಗ್ರೆಸ್ ನ್ನು ಗೆಲ್ಲಿಸುತ್ತಾರೆ ಎಂದು ಜಯಮಾಲ ತಿಳಿಸಿದ್ದಾರೆ.
Comments