ರೈತರ ಪಾಲಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಬಿಗ್ ಡಿಸಿಶನ್..! ಏನದು ಗೊತ್ತಾ..?

ರೈತರಿಂದ ಮತ್ತು ಬಡವರಿಂದ ಹೆಚ್ಚು ಬಡ್ಡಿಯನ್ನು ವಸೂಲಿ ಮಾಡುತ್ತಿರುವ ಖಾಸಗಿ ಲೇವಾದೇವಿದಾರರಿಗೆ ಕಡಿವಾಣ ಹಾಕಲು ಈಗಾಗಲೇ ನಿರ್ಧರಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಇದೀಗ ಚಿನ್ನಾಭರಣಗಳನ್ನು ಅಡಮಾನ ಇಟ್ಟುಕೊಂಡು ಸಾಲ ನೀಡುವ ಹಣಕಾಸು ಸಂಸ್ಥೆಗಳ ಮೇಲೂ ದೃಷ್ಟಿಯನ್ನು ಹಾಯಿಸಿದೆ ಎಂದು ಹೇಳಲಾಗುತ್ತಿದೆ.
ರಾಜ್ಯದಲ್ಲಿ ಬ್ಯಾಂಕೇತರ ಹಣಕಾಸು ಸಂಸ್ಥೆಗಳು (ಎನ್‌ಬಿಎಫ್‌ಸಿ) ಚಿನ್ನಾಭರಣ ಗಳನ್ನು ಅಡಮಾನ ಇಟ್ಟುಕೊಂಡು ಹೆಚ್ಚಿನ ಬಡ್ಡಿ ದರದಲ್ಲಿ ಸಾಲ ನೀಡುತ್ತಿರುವ ಬಗ್ಗೆ ಈಗಾಗಲೇ ದೂರುಗಳು ಬಂದಿದ್ದು ಅಂತಹ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಕಾನೂನು ಇಲಾಖೆಯ ಅಭಿಪ್ರಾಯ ಕೇಳಲಾಗಿದೆ ಎಂದು ಸಹಕಾರ ಸಚಿವರಾದ ಬಂಡೆಪ್ಪ ಕಾಶೆಂಪೂರ್ ಅವರು ತಿಳಿಸಿದ್ದಾರೆ. ಚಿನ್ನದ ಮೇಲೆ ಸಾಲ ನೀಡುವ ಕಂಪನಿಗಳು ಹೆಚ್ಚು ಬಡ್ಡಿಯನ್ನು ವಿಧಿಸುತ್ತಿವೆ ಎಂಬ ಬಗ್ಗೆ ರಾಜ್ಯದ ವಿವಿಧೆಡೆಯಿಂದ ದೂರುಗಳು ಕೇಳಿ ಬರುತ್ತಿವೆ.. ಹೀಗಾಗಿ ಕೆಲ ಎನ್‌ಬಿಎಫ್‌ಸಿ ಅವರ ಬಡ್ಡಿ ಹಾವಳಿ ಕಡಿಮೆ ಮಾಡಲೂ ಸಹ ಕ್ರಮ ಕೈಗೊಳ್ಳುತ್ತೇವೆ ಎಂದು ಮಾಹಿತಿಯನ್ನು ನೀಡಿದರು.
Comments