ಸಮ್ಮಿಶ್ರ ಸರ್ಕಾರದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿ.ವಿ.ಎಸ್..!

ಸಮ್ಮಿಶ್ರ ಸರ್ಕಾರ ರಚನೆಯಾಗಿ ತಿಂಗಳುಗಳು ಕಳೆದವು.. ಆದರೆ ಇನ್ನೊಂದು ತಿಂಗಳಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗುತ್ತದೆ ಎಂದು ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ ಅವರು ಭವಿಷ್ಯವನ್ನು ನುಡಿದಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ವಿ.ಸದಾನಂದ ಗೌಡರು ಸಮ್ಮಿಶ್ರ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಅನ್ನೋದು ನೂರಕ್ಕೆ ನೂರು ಸತ್ಯ. ಬಿಜೆಪಿಯು ಯಾವುದೇ ಕಾರಣಕ್ಕೂ ಸರ್ಕಾರವನ್ನು ಬೀಳಿಸಲು ಮುಂದಾಗುವುದಿಲ್ಲ. ನಮಗೆ ಬೇರೆಯವರು ಬೆಂಬಲ ಕೊಡಲು ಬಂದಾಗಷ್ಟೇ ನಾವು ಮುಂದುವರೆಯುತ್ತವೆ ಎಂದು ತಿಳಿಸಿದರು. ಕಾಂಗ್ರೆಸ್ ಶಾಸಕರ ಅಪಸ್ವರ ಕುರಿತು ಪ್ರತಿಕ್ರಿಯೆಯನ್ನು ನೀಡಿದ ಡಿವಿಎಸ್, ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಸಿಎಂ ಕುರ್ಚಿಯಿಂದ ಕೆಳಗಿಸುವುದೇ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಗುರಿಯಾಗಿದೆ. ಸಿದ್ದರಾಮಯ್ಯ ಅವರು ದ್ವೇಷ ಶಮನ ಮಾಡಲು ಸಾಧ್ಯವೇ ಇಲ್ಲ. ಹಾಗಾಗಬೇಕಾದರೆ ಕುಮಾರಸ್ವಾಮಿ ಅಧಿಕಾರದಿಂದ ಇಳಿಯಬೇಕು ಎಂದು ಡಿ.ವಿ.ಸದಾನಂದ ಗೌಡ ಅವರು ತಿಳಿಸಿದರು.
Comments