ಜೆಡಿಎಸ್ ಗೆ ಸಿಕ್ಕಿದೆ ಹೈಕಮಾಂಡ್ ಬೆಂಬಲ..! ಈಗಂತ ಹೇಳಿದ್ದು ಯಾರು ಗೊತ್ತಾ..?
ಜೆಡಿಎಸ್ ಗೆ ಬೆಂಬಲ ನೀಡಬೇಕು ಎನ್ನುವುದು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವಾಗಿದೆ. ಅದು ನಮ್ಮ ನಿರ್ಧಾರ ಅಲ್ಲ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ತಿಳಿಸಿದ್ದಾರೆ.
ನಗರದಲ್ಲಿ ಕನದಾಸ ಪುತ್ಥಳಿ ಅನಾವರಣಗೊಳಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ, ಸರ್ಕಾರದಲ್ಲಿ ಎರಡು ಪಕ್ಷಗಳ ನಡುವೆ ಸಮನ್ವಯ ಸಾಧಿಸುವದಷ್ಟೇ ಸಮನ್ವಯ ಸಮಿತಿಯ ಕೆಲಸ ಎಂದು ತಿಳಿಸಿದರು.. ಇದೇ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಅವರನ್ನು ಸಮನ್ವಯ ಸಮಿತಿಗೆ ಸೇರ್ಪಡೆಗೊಳಿಸುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯನವರು ಅದೆಲ್ಲಾ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಹೇಳಿದರು.
Comments